ಬೆಂಗಳೂರು
ಪೋಲೀಸರ ವೇತನ ಸಂಬಂಧ ಔರಾದ್ಕರ್ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದರು.
ಪೊಲೀಸ್ ಸಮವಸ್ತ್ರ ಧರಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಕೂಡಲೇ ಔರಾದ್ಕರ್ ವರದಿಯನ್ನು ಜಾರಿಗೊಳಿಸಿ ಸರ್ಕಾರಿ ನೌಕರರಂತೆ 4ನೇ ಶನಿವಾರವೂ ರಜೆ, ಇನ್ನಿತರ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿದರು.
ಪೊಲೀಸರೂ ಸರ್ಕಾರಿ ನೌಕರರೆಂಬ ತಾರತಮ್ಯ ಮಾಡದೆ ಎಲ್ಲರಿಗೂ ಒಂದೇ ರೀತಿಯ ವೇತನ ನೀಡಬೇಕೆಂದು ಸರ್ಕಾರವನ್ನು ವಾಟಾಳ್ ಒತ್ತಾಯಿಸಿದರು.
ಪೊಲೀಸರ ಸಮಸ್ಯೆಗಳ ಬಗ್ಗೆ ವಿಧಾನಸಭಾ ಅಧಿವೇಶನದಲ್ಲಿ ಯಾವೊಬ್ಬ ಶಾಸಕರು ಮಾತನಾಡುತ್ತಿಲ್ಲ. ಪೊಲೀಸರ ನೋವಿಗೆ ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








