ಚಿಕ್ಕಮಗಳೂರು :
ಮಾನ್ಸೂನ್ ರಾಜ್ಯವನ್ನು ಪ್ರವೇಶಿಸಿದೆ. ಇದ್ರಿಂದಾಗಿ ರಾಜ್ಯದ ಹಲವೆಡೆ ಉತ್ತಮ ಮಳೆಯಾಗ್ತಿದೆ. ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗ್ತಿದ್ದು, ಚಾರ್ಮಾಡಿ ಘಾಟ್ ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಮೂಡಿಗೆರೆ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಧಾರಾಕಾರ ಮಳೆಯಾಗ್ತಿದೆ. ಇದರ ಪರಿಣಾಮ ಕೊಟ್ಟಿಗೆಹಾರ, ಸೋಮನಕಾಡು, ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮರಗಳು ಧರೆಗುರುಳಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಆದ್ರೆ ರಸ್ತೆ ಮೇಲೆ ಬಿದ್ದಿರುವ ಮರಗಳನ್ನು ಅರಣ್ಯ ಇಲಾಖೆಯವರು ಇನ್ನೂ ತೆರವುಗೊಳಿಸಿಲ್ಲದಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.
ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್‍ನಲ್ಲಿ ಮಂಜು ಮುಸುಕುವುದರಿಂದ ಮಂಜಿನ ಮಧ್ಯೆ ವಾಹನ ಚಲಾವಣೆ ಮಾಡುವುದು ಸಹ ಕಷ್ಟಕರವಾಗಿದೆ. ಅಲ್ಲದೆ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿದಿದ್ದು ಚಾರ್ಮಾಡಿ ಘಾಟ್‍ನಲ್ಲಿ ವಾಹನ ಚಾಲನೆ ಅಪಾಯಕಾರಿ ಎನ್ನಲಾಗುತ್ತಿದೆ. ಹೀಗಾಗಿ ಈ ಭಾಗದಲ್ಲಿ ತಾತ್ಕಾಲಿಕವಾಗಿ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ