ಬೆಂಗಳೂರು
ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಇಬ್ಬರು ಯುವಕರ ಹಿಂಸೆ ತಾಳಲಾರದೇ ಅಪ್ರಾಪ್ತ ಬಾಲಕಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಕಿರುಕುಳ ನೀಡಿದ ಇಬ್ಬರು ಆರೋಪಿಗಳನ್ನು ಡಾಬಸ್‍ಪೇಟೆ ಪೊಲೀಸರು ಬಂಧಿಸಿದ್ದಾರೆ.
ನೆಲಮಂಗಲದ ಎಡೇಹಳ್ಳಿಯ ಧನಲಕ್ಷ್ಮೀ (14) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ ಯಡೇಹಳ್ಳಿಯ ಜಗದೀಶ್ ಹಾಗೂ ರವಿಕುಮಾರ್ ಪ್ರೀತಿಸುವಂತೆ ಬಾಲಕಿಗೆ ಕಿರುಕುಳ ನೀಡುತ್ತಿದ್ದರು.
ಯುವಕರ ಕಿರುಕುಳ ತಾಳಲಾರದೆ ಧನಲಕ್ಷ್ಮೀ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.ಪ್ರಕರಣ ದಾಖಲಿಸಿಕೊಂಡ ಡಾಬಸ್‍ಪೇಟೆ ಪೊಲೀಸರು ಜಗದೀಶ್ ಹಾಗೂ ರವಿಕುಮಾರ್‍ನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








