ಚಿತ್ರದುರ್ಗ:
ನಗರದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಕ್ರಿಕೆಟ್ ಬೆಟ್ಟಿಂಗ್ ಹಾಗೂ ಮಟ್ಕಾ ದಂದೆಗೆ ಕಡಿವಾಣ ಹಾಕುವಂತೆ ಜೈಹಿಂದ್ ರಕ್ಷಣಾ ವೇದಿಕೆ ವತಿಯಿಂದ ಮಂಗಳವಾರ ಅಪರ ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಸುಲಭವಾಗಿ ಹಣ ಗಳಿಸಬಹುದೆಂಬ ಆಸೆಯಿಂದ ಬಡವರು, ಕೂಲಿ ಕಾರ್ಮಿಕರು, ಮಧ್ಯಮ ವರ್ಗದವರು ಕ್ರಿಕೆಟ್ ಬೆಟ್ಟಿಂಗ್ ಹಾಗೂ ಮಟ್ಕಾ ದಂದೆಯಲ್ಲಿ ತೊಡಗಿ ಕೈಯಲ್ಲಿರುವ ಅಷ್ಟೊ ಇಷ್ಟು ಹಣವನ್ನು ಕಳೆದುಕೊಳ್ಳುತ್ತಿರುವುದರಿಂದ ಕುಟುಂಬ ಬೀದಿಪಾಲಾಗುವ ಹಂತಕ್ಕೆ ತಲುಪುತ್ತಿವೆ. ಕೂಡಲೆ ಇಂತಹ ದಂದೆ ನಡೆಸುತ್ತಿರುವವರ ಮೇಲೆ ದಾಳಿ ನಡೆಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಜೈಹಿಂದ್ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಸೈಯದ್ ಅಖ್ತರ್, ಸುಹೀಲ್, ತಿಪ್ಪೇಸ್ವಾಮಿ, ಜಬೀವುಲ್ಲಾ, ಮುಜೀಬ್, ದ್ಯಾಮಣ್ಣ, ಮಹೇಶ್, ಮುನ್ನಾ, ಹೇಮಂತ್ ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








