ಶಿವಮೊಗ್ಗ :
ಭೀಕರ ರಸ್ತೆ ಅಪಘಾತ ಸಂಭವಿಸಿ, ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಶಿವಮೊಗ್ಗದ ಕಂಚೇನಹಳ್ಳಿಯಲ್ಲಿ ನಡೆದಿದೆ.
ವಾಲ್ಯಾನಾಯ್ಕ್(48) ಹಾಗೂ ಸುಮಿಬಾಯಿ(44) ಮೃತ ದಂಪತಿ. ದಂಪತಿ ಗಾರೆ ಕೆಲಸಕ್ಕೆಂದು ಬೈಕ್ನಲ್ಲಿ ಹೋಗುತ್ತಿದ್ದರು. ಈ ವೇಳೆ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಲಾರಿ, ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.