ಮೂರು ಜಿಲ್ಲೆಗಳಲ್ಲಿ ಏಕರೂಪದ ನಿಖಾಹ್ ರಿಜಿಸ್ಟ್ರಿ ಜಾರಿಗೆ ತೀರ್ಮಾನ : ಕಣಚೂರು ಮೋನು ಹಾಜಿ

ಮಂಗಳೂರು

      ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಏಕರೂಪದ ನಿಖಾಹ್ ರಿಜಿಸ್ಟ್ರಿ ಯನ್ನು ಜಾರಿಗೆ ತರಲು ನಿರ್ಧರಿ ಸಲಾಗಿದೆ, ಇಲ್ಲಿನ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಅಧ್ಯಕ್ಷ ಕಣಚೂರು ಮೋನು ಹಾಜಿ ಅವರ ನೇತೃತ್ವದಲ್ಲಿ ಸಭೆ ಸೇರಿ ಈ ಕುರಿತು ಸರ್ವಾನುಮತದಿಂದ ತೀರ್ಮಾನ ತೆಗೆದುಕೊಳ್ಳಲಾಗಿದೆ.

        ಸಭೆಯಲ್ಲಿ ಮೂರು ಜಿಲ್ಲೆಗಳಲ್ಲಿ ಏಕರೂಪ ಮದುವೆ ನೋಂದಣಿ ವ್ಯವಸ್ತೆ ಜಾರಿಗೆ ತರುವ ಸಾಧಕ – ಬಾಧಕಗಳ ಬಗ್ಗೆ ಕೂಲಂಕುಶವಾಗಿ ಚರ್ಚೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಉಡುಪಿ ಜಿಲ್ಲಾ ಖಾಝಿ ಇಬ್ರಾಹಿಮ್ ಬೇಕಲ ಉಸ್ತಾದ್, ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಕೂರ, ಬಂಬ್ರಾಣ ಅಬ್ದುಲ್ ಖಾದರ್ ಮುಸ್ಲಿಯಾರ್, ಶಾಫಿ ಸಹದಿ, ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಹುಸೈನ್ ದಾರಿಮಿ ರೆಂಜಲಾಡಿ, ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ, ಮಮ್ತಾಜ್ ಅಲಿ ಝೈನಿ ಉಸ್ತಾದ್ ,ನ್ಯಾಯವಾದಿ ಇಸ್ಮಾಯಿಲ್ ನೆಲ್ಯಾಡಿ ಮೊದಲಾದವರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link