ಬೆಂಗಳೂರು:

ಬೆಂಗಳೂರು ಸೇರಿದಂತೆ ಹಲವೆಡೆ ಭ್ರಷ್ಟಾಚಾರ ನಿಗ್ರಹದಳ(ಎಸಿಬಿ) ಅಧಿಕಾರಿಗಳು ರಾಜ್ಯದ ವಿವಿಧ ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಸರ್ಕಾರಿ ಆಧಿಕಾರಿಗಳ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಎಸಿಬಿ ಅಧಿಕಾರಿಗಳು ಬೆಳ್ಳಂಬೆಳ್ಳಗೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ರಾಮನಗರದಲ್ಲಿ ಬಮುಲ್ ಉಪ ವ್ಯವಸ್ಥಾಪಕ ಶಿವಶಂಕರ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಶಿವಶಂಕರ್ ಅವರಿಗೆ ಸೇರಿದ ನಿವಾಸ, ಸಂಬಂಧಿಕರ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ನಿರ್ದೇಶಕ ನಾರಾಯಣಸ್ವಾಮಿ ಅವರ ಬೆಂಗಳೂರಿನ ಜಯನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಅಲ್ಲದೇ, ಕೋಲಾರ, ಚಿಂತಾಮಣಿ ಹಾಗೂ ಸ್ವಗ್ರಾಮ ಮಾದರಕಲ್ಲು ಮನೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಅದೇ ರೀತಿ ನಾರಾಯಣಸ್ವಾಮಿಯವರ ಮಾವನವರ ಮನೆ ಮೇಲೆಯೂ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ರಾಜ್ಯದ ವಿವಿಧೆಡೆ ದಾಳಿ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








