ಆರ್ ಬಿಐ ಡೆಪ್ಯುಟಿ ಗವರ್ನರ್ ವಿರಳ್ ಆಚಾರ್ಯ ರಾಜೀನಾಮೆ!!

ನವದೆಹಲಿ :

      ಆರ್ ಬಿಐ ಡೆಪ್ಯುಟಿ ಗವರ್ನರ್ ವಿರಳ್ ಆಚಾರ್ಯ ಅವರು ತಮ್ಮ ಅಧಿಕಾರಾವಧಿ ಮುಗಿಯುವ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. 

     ಹೌದು, ಆಚಾರ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿದ್ದು ಆರ್‌ಬಿಐ ಇದನ್ನು ಇನ್ನೂ ಖಚಿತಪಡಿಸಿಲ್ಲ. ಸೋಮವಾರ ಮಧ್ಯಾಹ್ನದವರೆಗೆ ಆರ್‌ಬಿಐ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಬಹುದು ಎಂದು ಹೇಳಲಾಗುತ್ತಿದೆ.

       ಇವರು 2017, ಜ.23 ರಂದು ಆರ್ ಬಿಐ ನ ಡೆಪ್ಯುಟಿ ಗೌರ್ನರ್ ಆಗಿ ನೇಮಕಗೊಳ‍್ಳುವುದರ ಮೂಲಕ ಆರ್ ಬಿಐ ನ ಅತಿ ಕಿರಿಯ ಡೆಪ್ಯುಟಿ ಗೌರ್ನರ್ ಎಂಬ ಹೆಗ್ಗಳಿಕೆ ಹೊಂದಿದ್ದರು. ಅವರ ಮೂರು ವರ್ಷಗಳ ಅಧಿಕಾರಾವಧಿ 2020 ರ ಜನವರಿಯಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ ಇದೀಗ ಅವರ ಅಧಿಕಾರವಧಿಗೆ ಇನ್ನೂ 6 ತಿಂಗಳು ಇರುವಾಗಲೆ ರಾಜೀನಾಮೆ ಸಲ್ಲಿಸಿದ್ದಾರೆ.

      ತಮ್ಮ ರಾಜೀನಾಮೆಗೆ ವೈಯಕ್ತಿಕ ಕಾರಣಗಳನ್ನು ನೀಡಿರುವ ವಿರಳ್‌ ಆಚಾರ್ಯ ಮುಂದೆ ನ್ಯೂಯಾರ್ಕ್ ವಿವಿಯಲ್ಲಿ ಬೋಧಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎನ್ನಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link