‘ನನ್ನ ವಿರುದ್ಧ ಸುಳ್ಳು ಸುದ್ದಿ ಮಾಡಿದವರನ್ನು ಸುಮ್ಮನೆ ಬಿಡಲ್ಲ’-ಡಿಸಿಎಂ ಗರಂ!!!

ತುಮಕೂರು :

      ನನ್ನ ವಿರುದ್ಧ ಸುಳ್ಳು ಸುದ್ದಿ ಮಾಡಿದವರನ್ನು ಸುಮ್ಮನೆ ಬಿಡಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರು ಮಾಧ್ಯಮಗಳ ವಿರುದ್ಧ  ಕಿಡಿಕಾರಿದ್ದಾರೆ.

      ನಿನ್ನೆ ಡಿಸಿಎಂ ಪರಮೇಶ್ವರ್ ಸಾಗುವ ಮಾರ್ಗದಲ್ಲಿ ಬಿಜೆಪಿ ಬಾವುಟ ಹಾಕಿದ್ದ ವ್ಯಕ್ತಿಗೆ ನೋಟೀಸ್ ನೀಡಿದ ಕುರಿತಂತೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮಾಧ್ಯಮದವರು ನಮ್ಮ ಜೊತೆನೆ ಇರುತ್ತಾರೆ. ಜೊತೆಯಲ್ಲೇ ಕಾಫಿ ಕುಡಿತಾರೆ, ಊಟ ಮಾಡ್ತಾರೆ, ಆದರೂ ನಮ್ಮ ವಿರುದ್ಧವಾಗಿ ಸುದ್ದಿ ಮಾಡ್ತಾರೆ ಎಂದು ಗರಂ ಆಗಿದ್ದಾರೆ.

     ನನ್ನ ವಿರುದ್ಧ ಸುಳ್ಳು ಸುದ್ದಿ ಕೊಟ್ಟರೆ ನಾನು ಸುಮ್ಮನಿರಲ್ಲ. ನನ್ನ ತಪ್ಪು ಇದ್ದರೆ ಹೇಳಿ ತಿದ್ದಿಕೊಳ್ಳುತ್ತೇನೆ. ದಯವಿಟ್ಟು ಯಾರದ್ದೋ ತಪ್ಪನ್ನು ನನ್ನ ತಲೆಗೆ ಕಟ್ಟಿ ಅವಮಾನ ಮಾಡುವ ರೀತಿ ಮಾಡಬೇಡಿ. ನಾವು ಸಾರ್ವಜನಿಕರ ಬದುಕಿನಲ್ಲಿ ಹತ್ತಾರು ವರ್ಷ ನಮ್ಮ ವ್ಯಕ್ತಿತ್ವವನ್ನು ಕಟ್ಟಿಕೊಂಡು ಬರುತ್ತೇವೆ. ಅದನ್ನು ನೀವು 2 ನಿಮಿಷದಲ್ಲೇ ಮಾನ ಹರಾಜು ಮಾಡಬೇಡಿ ಎಂದು ಮನವಿ ಮಾಡಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link