ಬಳ್ಳಾರಿ
ಪ್ರಧಾನ ಮಂತ್ರಿ ಕಿಸಾನ್ ನಿಧಿ ಯೋಜನೆಯನ್ನು ಭಾರತ ಸರ್ಕಾರವು ಜೂನ್ 07ರಂದು ಪ್ರಕಟಿಸಿದ ಸುತ್ತೋಲೆಯಂತೆ ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ರೈತರಿಗೆ ವರ್ಷಕ್ಕೆ 6 ಸಾವಿರ ರೂ.ಗಳ ಪ್ರತಿ ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು 3 ಸಮಾನ ಕಂತುಗಳನ್ನು ನೀಡಲಾಗುತ್ತಿದ್ದು, ಈ ಯೋಜನೆಯನ್ನು ಪಡೆದುಕೊಳ್ಳಲು ಜೂನ್ 27 ರಂದು ಕೊನೆಯ ದಿನವಾಗಿರುತ್ತದೆ. ರೈತರು ಕೂಡಲೇ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಮನವಿ ಮಾಡಿದ್ದಾರೆ.
ಈ ಯೋಜನೆಯನ್ನು ಪಡೆಯಲು ಯಾವುದೇ ಸರ್ಕಾರಿ ಸ್ವಾಮ್ಯದ ಕೇಂದ್ರಗಳಾದ ಗ್ರಾಪಂ ಬಾಪೂಜೀ ಸೇವಾ ಕೇಂದ್ರಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿ, ಹೋಬಳಿಯ ರೈತ ಸಂಪರ್ಕ ಕೇಂದ್ರಗಳು, ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಸಂಪರ್ಕಿಸಿ ನೊಂದಣಿ ಮಾಡಿಕೊಳ್ಳಬಹುದು ಎಂದು ಅವರು ವಿವರಿಸಿದ್ದಾರೆ.
ರೈತರು ಸ್ವಯಂ ಘೋಷಿತ ದೃಢಿಕೃತ ಪತ್ರದಲ್ಲಿ ಆಧಾರ್ ಕಾರ್ಡ್, ಪಹಣಿ (ಸರ್ವೆ ನಂ) ಸಂಖ್ಯೆ ಮಾಹಿತಿ, ಬ್ಯಾಂಕ್ ಖಾತೆ ಪಾಸ್‍ಬುಕ್ ಹಾಗೂ ಇತರೆ ದಾಖಲೆಗಳೊಂದಿಗೆ ಜೂ.27ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿರುವ ಜಿಲ್ಲಾಧಿಕಾರಿ ನಕುಲ್ ಅವರು ಹೆಚ್ಚಿನ ಮಾಹಿತಿಗೆ ಆಯಾ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿ, ಗ್ರಾಮ ಪಂಚಾಯಿತಿ, ಹೋಬಳಿಯ ನಾಡ ಕಚೇರಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








