ಬೆಂಗಳೂರು
ವೇಗವಾಗಿ ಬಂದ ಟೆಂಪೋ ಟ್ರಾವೆಲರ್ (ಟಿಟಿ) ಡಿಕ್ಕಿ ಹೊಡೆದು ಸ್ಕೂಟರ್ನಲ್ಲಿ ಹೋಗುತ್ತಿದ್ದ ಬಿಎಂಟಿಸಿ ಚಾಲಕರೊಬ್ಬರು ಮೃತಪಟ್ಟಿರುವ ದುರ್ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಅನಂತಪುರ ಗೇಟ್ ಬಳಿ ನಡೆದಿದೆ.
ಮೃತಪಟ್ಟವರನ್ನು ಯಲಹಂಕದ ಅನಂತಪುರದ ಹನುಮಂತಪ್ಪ (39)ಎಂದು ಗುರುತಿಸಲಾಗಿದೆ. ಬಿಎಂಟಿಸಿ ಬಸ್ ಚಾಲಕರಾಗಿದ್ದ ಹನುಮಂತಪ್ಪ,ಗುರುವಾರ ಮಧ್ಯಾಹ್ನ 2ರ ವೇಳೆ ಕೆಲಸ ಮುಗಿಸಿಕೊಂಡು ಯಲಹಂಕ ಡಿಪೋದಿಂದ ಮನೆಗೆ ಹೋಂಡಾ ಆಕ್ಟಿವಾ ಸ್ಕೂಟರ್ನಲ್ಲಿ ಹೋಗುತ್ತಿದ್ದರು.
ಮಾರ್ಗಮಧ್ಯೆ ಅನಂತಪುರ ಗೇಟ್ ಬಳಿ ಟಿಟಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಹನುಮಂತಪ್ಪ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಪ್ರಕರಣ ದಾಖಲಿಸಿರುವ ಯಲಹಂಕ ಸಂಚಾರ ಪೊಲೀಸರು ಟಿಟಿಯನ್ನು ವಶಪಡಿಸಿಕೊಂಡು ಚಾಲಕನಿಗಾಗಿ ತೀವ್ರ ಶೋಧ ನಡೆಸಿದ್ದಾರೆ ಎಂದು ಡಿಸಿಪಿ ಸಾರಾ ಫಾತೀಮಾ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
