ಶಿವಮೊಗ್ಗ:
ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ತೀವ್ರ ಅಸ್ವಸ್ಥರಾದ ಹಿನ್ನಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಶುಕ್ರವಾರ ದಾಖಲಿಸಲಾಗಿದ್ದಾರೆ.
ಮ್ಯಾಕ್ಸ್ ಆಸ್ಪತ್ರೆಯ ನಿರ್ದೇಶಕ ನಾಗೇಂದ್ರ ಸುದ್ದಿಗಾರರೊಂದಿಗೆ ಮಾತನಾಡಿ, ಉಸಿರಾಟ ಸಂಬಂಧಿ ಹಾಗೂ ಬಿಪಿ ಏರಿಳಿತಕ್ಕೆ ಸಂಬಂಧಿಸಿದಂತೆ ಆರೋಗ್ಯದಲ್ಲಿ ಏರುಪೇರಾಗಿದ್ದು ಚಿಕಿತ್ಸೆ ನಂತರ ಅವರು ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಆಗಿದೆ. ಸದ್ಯ ಐಸಿಯು ನಿಂದ ಸ್ಪೆಷಲ್ ವಾರ್ಡ್ ಗೆ ಅವರನ್ನು ಸ್ಥಳಾಂತರಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ತಿಮ್ಮಪ್ಪನವರನ್ನು ಸಂಜೆ ಬೆಂಗಳೂರಿಗೆ ಕರೆದೊಯ್ಯುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ