ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧ

ಮಧುಗಿರಿ

     ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧವಾಗಿದ್ದು ಕುಡಿಯುವ ನೀರು ಮತ್ತು ರಾಸುಗಳಿಗೆ ಮೇವು ಒದಗಿಸಲು ಜಿಲ್ಲಾಧಿಕಾರಿಗಳಿಗೆ ಹಣ ನೀಡಲಾಗಿದೆ. ಬೇಡಿಕೆ ಇರುವವರೆಗೂ ಮೇವನ್ನು ಪೂರೈಸಲಾಗುವುದು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.

      ತಾಲ್ಲೂಕಿನ ಕಸಬಾ ಹೋಬಳಿ ಚಿನಕವಜ್ರ ಗ್ರಾಮದ ದೊಡ್ಡತಿಮ್ಮಯ್ಯ ಅವರ ಖಾಸಗಿ ಕೊಳವೆ ಬಾವಿಯಿಂದ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವುದನ್ನು ವೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರು ಹಾಗೂ ರಾಸುಗಳಿಗೆ ಮೇವನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ. ಕುಡಿಯುವ ನೀರಿಗೆ ಅಭಾವವಿರುವಲ್ಲಿ ಟ್ಯಾಂಕರ್ ಮೂಲಕ ನೀರನ್ನು ಒದಗಿಸಲಾಗುತ್ತಿದೆ ಎಂದರು.

       ಈ ಬಾರಿಯ ಕೇಂದ್ರ ಬಜೆಟ್ ನಿರಾಶದಾಯಕವಾಗಿದ್ದು, ಮೂಲಭೂತ ಸೌಕರ್ಯಕ್ಕೆ ಹೆಚ್ಚು ಒತ್ತು ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಮಧುಗಿರಿಯನ್ನು ಕಂದಾಯ ಜಿಲ್ಲೆಯನ್ನಾಗಿಸುವುದರ ಬಗ್ಗೆ ಇಲ್ಲಿಯವರೆಗೂ ನನ್ನ ಗಮನಕ್ಕೆ ಬಂದಿಲ್ಲ. ಇದರ ಬಗ್ಗೆ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳೂಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

       ಈ ಸಂದರ್ಭದಲ್ಲಿ ಶಾಸಕ ಎಂ.ವಿ.ವೀರಭಧ್ರಯ್ಯ, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಜಿ.ಪಂ ಸಿಇಓ ಶುಭಾ ಕಲ್ಯಾಣ್, ಎಎಸ್‍ಪಿ ಶೋಭಾರಾಣಿ ಉಪವಿಭಾಗಾಧಿಕಾರಿ ಚಂದ್ರಶೇಖರಯ್ಯ, ತಹಸೀಲ್ದಾರ್ ನಂದೀಶ್, ತಾ.ಪಂ ಇಓ ನಂದಿನಿ, ಎಡಿಓ ದೊಡ್ಡಸಿದ್ದಪ್ಪ, ಆರ್.ಐ ಜಯರಾಮಯ್ಯ, ಮುಖಂಡರಾದ ತುಂಗೋಟಿ ರಾಮಣ್ಣ, ಪಾಪೀರಣ್ಣ, ರಘು, ಹನುಮಂತಗೌಡ, ರಾಮಣ್ಣ, ಸಿಪಿಐ ದಯಾನಂದ ಸೇಗುಣಸಿ ಹಾಗೂ ಮುಂತಾದವರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link