ಬೆಂಗಳೂರು:
ರಾಜದಲ್ಲಿ ಅಧಿಕಾರದಲ್ಲಿರುವ ಕೈದಳದ ಸಮ್ಮಿಶ್ರ ಸರ್ಕಾರ ವಿರುದ್ಧ ಮತ್ತೊಬ್ಬ ಬೆಂಗಳೂರಿನ ಶಾಸಕ ರಾಜಿಇನಾಮೆಗೆ ಮುಂದಾಗಿದ್ದಾರೆ .
ಈ ಹಿಂದೆ ಲೋಕಸಭಾ ಚುನಾವಣೆಯ ನಂತರ ಸರ್ಕಾರದ ವಿರುದ್ಧ ತಿರುಗಿ ಬಿದ್ದು ಕಾಂಗ್ರೆಸ್‍ನಿಂದ ಉಚ್ಛಾಟನೆಗೊಂಡಿದ್ದ ಶಿವಾಜಿನಗರ ಶಾಸಕ ರೋಷನ್ ಬೇಗ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ರೋಷನ್ ಬೇಗ್ ಅವರು ನಾನು ರಾಜ್ಯ ಹಜ್ ಕಮೀಟಿ ಅಧ್ಯಕ್ಷನಾಗಿದ್ದು, ಕಳೆದ ಐದು ದಿನಗಳಿಂದ ಯಾತ್ರೆಗೆ ತೆರಳುತ್ತಿರುವ ಯಾತ್ರಾರ್ಥಿಗಳು ಬೆಂಗಳೂರಿಗೆ ಬರುತ್ತಿದ್ದಾರೆ. ಎಲ್ಲ ಯಾತ್ರಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಹಜ್ ಭವನದಲ್ಲಿ ಬ್ಯುಸಿ ಆಗಿದ್ದೆ. ಇಂದು ರಾತ್ರಿ ಯಾತ್ರಿಗಳು ಹಜ್ ನತ್ತ ಪ್ರಯಾಣಿಸುತ್ತಾರೆ. ಹಜ್ ಯಾತ್ರಿಗಳನ್ನು ಸುರಕ್ಷಿತವಾಗಿ ಕಳುಹಿಸುವುದು ನನ್ನ ಮೊದಲ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ನನ್ನನ್ನು ಈಗಾಗಲೇ ಅಮಾನುತು ಮಾಡಿದೆ. ಅಂದು ನಾನು ಆಡಿದ್ದ ಮಾತುಗಳೇ ದೊಡ್ಡ ಅಪರಾಧವಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ 14 ಸಾವಿರಕ್ಕೂ ಹೆಚ್ಚು ಮತಗಳ ಲೀಡ್ ಬಂದಿದೆ. ಬೇರೆ ಯಾವ ಕ್ಷೇತ್ರದ ಅಭ್ಯರ್ಥಿಯೂ ಈ ಕೆಲಸವನ್ನು ಮಾಡಲಿಲ್ಲ. ಕೋಲಾರಲ್ಲಿ ದಲಿತ ನಾಯಕನನ್ನು ಸೋಲಿಸುತ್ತೇವೆ ಎಂದು ನಮ್ಮ ಪಕ್ಷದ ಶಾಸಕರೇ ಹೇಳಿದ್ದರು. ಇತ್ತ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಪರ ಕಾಂಗ್ರೆಸ್ ನಾಯಕರು ಪ್ರಚಾರ ನಡೆಸಿದರು. ಅಂತವರ ವಿರುದ್ಧ ಪಕ್ಷ ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲ ಆದರೆ ನನ್ನ ಮೇಲೆ ಮಾತ್ರ ಕ್ರಮ ಕೈಗೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ನಾಲ್ಕೈದು ದಿನ ಹಜ್ ಯಾತ್ರಿಗಳ ಕೆಲಸ ಮುಗಿಯುತ್ತದೆ. ರಾಜೀನಾಮೆ ನೀಡಲು ಮುಂದಾಗಿರುವ 7 ರಿಂದ 8 ಶಾಸಕರಲ್ಲಿ ನಾನು ಕೂಡ ಇರಬಹುದು. ಒಂದು ವೇಳೆ ನಾನು ರಾಜೀನಾಮೆ ನೀಡಿದ್ರೆ ಯಾವುದೇ ತಪ್ಪಿಲ್ಲ. ಇಂದು ಕಾಂಗ್ರೆಸ್ ಅವರಿಗೆ ರಾಮಲಿಂಗಾ ರೆಡ್ಡಿ ಅವರು ನೆನಪಿಗೆ ಬಂದಿದ್ದಾರೆ ವ್ಯಂಗ್ಯದ ಮಾತನಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/07/6y_B8j-H.gif)