ಮುಂಬೈ :
ಕಳೆದ 6 ಗಂಟೆಯಿಂದ ಅತೃಪ್ತ, ಬಂಡಾಯ ಶಾಸಕರು, ರಾಜೀನಾಮೆ ನೀಡಿ ಹೋಟೆಲ್ ನಲ್ಲಿ ಉಳಿದಿರುವ ರಿನೈಸೆನ್ಸ್ ಹೋಟೆಲ್ ಮುಂದೆ ಕುಳಿತಿದ್ದ ಸಚಿವ ಡಿಕೆ ಶಿವಕುಮಾರ್ ಅವರನ್ನು, ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದಡಿ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಿಗ್ಗೆಯಿಂದ ಅತೃಪ್ತರು ತಂಗಿದ್ದ ಮುಂಬೈನ್ ರಿನೈಸೆನ್ಸ್ ಹೋಟೆಲ್ ಗೆ ತಾವು ರೂಂ ಬುಕ್ ಮಾಡಿರುವುದಾಗಿ ತೆರಳಿ, ಆ ಮೂಲಕ ಬಂಡಾಯ, ಅತೃಪ್ತ ಶಾಸಕರನ್ನು ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ನಡೆಸಿದ್ದ, ಸಚಿವ ಡಿಕೆ ಶಿವಕುಮಾರ್ ಅವರು ಹೋಟೆಲ್ ಸಿಬ್ಬಂದಿ ಮತ್ತು ಪೊಲೀಸರು ನಡುವೆ ಮಾತುಕತೆ ನಡೆದಿದ್ದು, ಡಿ.ಕೆ.ಶಿವಕುಮಾರ್ ಅವರಿಗೆ ಹೋಟೆಲ್‍ನಲ್ಲಿ ರೂಮ್ ಕೊಡಲು ಒಪ್ಪಿಗೆ ನೀಡಲಾಗಿತ್ತು. ಆದರೆ ಅತೃಪ್ತ ಶಾಸಕರ ತಂಗಿರುವ ಬಿಲ್ಡಿಂಗ್ ಬಿಟ್ಟು ಬೇರೆ ಬಿಲ್ಡಿಂಗ್‍ನಲ್ಲಿ ಡಿಕೆಶಿಗೆ ರೂಮ್ ಕೊಡಲು ಸಿಬ್ಬಂದಿ ಒಪ್ಪಿಗೆ ಸೂಚಿಸಿದ್ದರು.
ನನಗೆ ಶಾಸಕರು ಇರುವ ಬಿಲ್ಡಿಂಗ್‍ನಲ್ಲೇ ರೂಮ್ ಬೇಕೇಬೇಕು ಎಂದು ಹೋಟೆಲ್ ಸಿಬ್ಬಂದಿ ಬಳಿ ಶಿವಕುಮಾರ್ ಬಿಗಿ ಪಟ್ಟು ಹಿಡಿದಿದ್ದಾರೆ. ಪೊಲೀಸರು ಮತ್ತು ಸಿಬ್ಬಂದಿ ಡಿಕೆಶಿ ಅವರ ಮನವೊಲಿಸಲು ಪ್ರಯತ್ನ ಮಾಡಿದ್ದರು. ಆದರೂ ಡಿಕೆಶಿ ತನ್ನ ಪಟ್ಟು ಬಿಡದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದಡಿ ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಅವರನ್ನು ಬಂಧಿಸಿ, ಕರೆದೊಯ್ದಿದ್ದಾರೆ.
Karnataka Minister DK Shivakumar who after being denied entry, was sitting outside Renaissance – Mumbai Convention Centre Hotel, detained by Mumbai Police.Section 144 had been imposed in the area. pic.twitter.com/dpHAObKkID
— ANI (@ANI) July 10, 2019
ಡಿಕೆಶಿ ಜೊತೆ ಶಿವಲಿಂಗೇಗೌಡ, ಜಿ.ಟಿ.ದೇವೇಗೌಡ ಸಹ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಈ ಮೂಲಕ ವಶಕ್ಕೆ ಪಡೆದಿರುವವರನ್ನು, ಮುಂಬಯಿ ವಿವಿ ಆವರಣಕ್ಕೆ ಪೊಲೀಸರು ಕರೆದೊಯ್ದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ