ತುಮಕೂರು: ನಗರದ ಮರಳೂರು ದಿಣ್ಣೆಯ ಬಡಾವಣೆ ಯೊಂದರಲ್ಲಿ ಎರಡು ಕೋಮಗಳ ನಡುವೆ ಘರ್ಷಣೆ ಸಂಭವಿಸಿದೆ.
ಕ್ಷುಲ್ಲಕ ಕಾರಣಕ್ಕೆ ಎರಡು ಕೋಮುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸ್ಥಳದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಯುವಕರ ದಂಡು ನೆರೆದಿದ್ದು ಇಡೀ ಬಡಾವಣೆಯಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದೆ.
ಕೂಡಲೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಮೊಕ್ಕಾಂ ಹೂಡಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಬಡಾವಣೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.