ನವದೆಹಲಿ :
ಇಂದು ಸಂಜೆ 6 ಗಂಟೆಯೊಳಗೆ ಸ್ಪೀಕರ್ ಮುಂದೆ ರಾಜೀನಾಮೆ ನೀಡಿ ಮುಂಬೈ ಸೇರಿರುವ ಎಲ್ಲಾ ಅತೃಪ್ತ ಶಾಸಕರು ಹಾಜರಾಗಬೇಕು ಎಂದು ಸುಪ್ರೀಂ ಆದೇಶ ನೀಡಿದೆ.
ಸುಪ್ರೀಂನಲ್ಲಿಂದು ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಿತು. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ತ್ರಿಸದ್ಯಸ ಅರ್ಜಿ ವಿಚಾರಣೆ ನಡೆಯಿತು.
ರಾಜೀನಾಮೆ ಸಲ್ಲಿಸಿರುವ ಅತೃಪ್ತ ಶಾಸಕರ ಅರ್ಜಿಯನ್ನು ಇಂದೇ ನಿರ್ಧರಿಸಿ. ಇಂದು ಸಂಜೆ 6 ಗಂಟೆಯೊಳಗೆ ಸ್ಪೀಕರ್ ಮುಂದೆ ಹಾಜರಾಗಬೇಕು. ಹಾಗಾಗಿ ಇಂದು ಎಲ್ಲ ಅತೃಪ್ತ ಶಾಸಕರು ಎಲ್ಲರೂ ಸ್ಪೀಕರ್ ಮುಂದೆ ಹಾಜರಾಗಬೇಕು. ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.
ವಿಚಾರಣೆ ವೇಳೆ ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಅವರು, ಸ್ಪೀಕರ್ ರಮೇಶ್ ಕುಮಾರ್ ಯಾವುದೇ ಕಾರಣವಿಲ್ಲದೇ, ಉದ್ದೇಶ ಪೂರ್ವಕವಾಗಿ ನಮ್ಮ ರಾಜೀನಾಮೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಅನಗತ್ಯವಾಗಿ ವಿಳಂಬ ಮಾಡುತ್ತಿದ್ದಾರೆ. ರಾಜೀನಾಮೆ ಪಡೆಯುವಂತೆ ಸ್ಪೀಕರ್ಗೆ ಸೂಚಿಸಿ ಎಂದು ಅತೃಪ್ತ 10 ಶಾಸಕರು ಸುಪ್ರೀಂಕೋರ್ಟ್ನಲ್ಲಿ ಬುಧವಾರ ಅರ್ಜಿ ಸಲ್ಲಿಸಿದ್ದರು ಎಂದು ಅತೃಪ್ತರ ಪರ ವಾದ ಮಂಡಿಸಿದರು.
ಇದೇ ವೇಳೆ ನ್ಯಾಯಪೀಠದ ಮುಂದೆ ಯಾವುದೇ ಕಾರಣವಿಲ್ಲದೇ, ಉದ್ದೇಶ ಪೂರ್ವಕವಾಗಿ ಸ್ಪೀಕರ್ ರಮೇಶ್ ಕುಮಾರ್ ನಮ್ಮ ರಾಜೀನಾಮೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಅನಗತ್ಯವಾಗಿ ವಿಳಂಬ ಮಾಡುತ್ತಿದ್ದಾರೆ. ಸರಕಾರವನ್ನು ಸ್ಪೀಕರ್ ಅವರು ಉಳಿಸುತ್ತಿದ್ದಾರೆ ಅಂತ ಅತೃಪ್ತರ ಪರ ವಾದ ಮಂಡಿಸಿದ ಮುಕುಲ್ ರೋಹಟಕಿ ಅವರು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ