ಬೆಂಗಳೂರು
ತಾವೇಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿರುವ ಸಚಿವ ಆರ್ ವಿ ದೇಶಪಾಂಡೆ ಯಾವುದೇ ಕಾರಣಕ್ಕೂ ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದೇವೆ.ಅವರು ಯಾವ ಕ್ಷಣದಲ್ಲಿ ಬೇಕದರೂ ನಿರ್ಧಾರ ಕೈಗೊಂಡು ಮುಖ್ಯಮಂತ್ರಿ ಅವರಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಲು ಸ್ವತಂತ್ರರಿದ್ದಾರೆ.ಮೈತ್ರಿ ಸರ್ಕಾರದ ರಕ್ಷಣೆಗಾಗಿ ಕಾಂಗ್ರೆಸ್ ನಾಯಕರು ಎಲ್ಲಾ ತ್ಯಾಗಕ್ಕೂ ಸಿದ್ಧರಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.
ಶಾಸಕರ ಅನರ್ಹತೆ ಸಂಬಂಧ ಅತೃಪ್ತರ ಶಾಸಕರ ವಿರುದ್ಧ ಕಾಂಗ್ರೆಸ್ ಶಾಸಕಾಂಗ ನಾಯಕರು ಸ್ಪೀಕರ್ ಗೆ ದೂರು ನೀಡಿದ್ದಾರೆ. ಅಧಿವೇಶನದ ವೇಳೆ ಶಾಸಕರು ವಿಪ್ ಉಲ್ಲಂಘನೆ ಮಾಡಿದರೆ ಆಗ ಮಾತ್ರ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯವಾಗಲಿದೆ ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಅಧಿವೇಶನ ವೇಳೆ ಎಲ್ಲ ಪಕ್ಷದವ ಮುಖ್ಯ ಸಚೇತಕರು ಶಾಸಕರಿಗೆ ವಿಪ್ ಜಾರಿ ಮಾಡುತ್ತಾರೆ. ಅದರಲ್ಲೇನು ವಿಶೇಷತೆ ಇಲ್ಲ. ಅದೇ ರೀತಿ ವಿಪ್ ಜಾರಿ ಮಾಡಿದ್ದೇವೆ. ವಿಪ್ ಉಲ್ಲಂಘನೆ ಮಾಡಿದ ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಶಾಸಕ ಸ್ಥಾನದಿಂದ ಅನರ್ಹಗೊಳಿಸುವ ಅವಕಾಶವಿದೆ ಎಂದು ಅವರು ಸ್ಪಷ್ಟಪಡಿಸಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
