ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ

ಬೆಂಗಳೂರು

     ಯುವಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ದುರ್ಘಚನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪೀಣ್ಯದ ಶಿವಪುರದ ಕೆರೆಯ ಹಿಂಭಾಗ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಯುವಕ ಸುಮಾರು 30 ವರ್ಷ ವಯಸ್ಸಿನವನಾಗಿದ್ದು, ಸದ್ಯಕ್ಕೆ ಆತನ ಹೆಸರು, ವಿಳಾಸ ಪತ್ತೆಯಾಗಿಲ್ಲ.

     ಕೊಲೆಯಾದ ಯುವಕ ಪೀಣ್ಯದ ಸುತ್ತಮುತ್ತಲ ವಾಸಿಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳು ನಿನ್ನೆ ರಾತ್ರಿ ಕೆರೆ ಹಿಂಭಾಗ ಯುವಕನನ್ನು ಕರೆತಂದು ಜಗಳ ಮಾಡಿ, ಕೊಲೆಗೈದು ಪರಾರಿಯಾಗಿದ್ದಾರೆ.

     ಶಿವಪುರ ಕೆರೆ ಬಳಿ ಇಂದು ಮುಂಜಾನೆ ವಾಯುವಿಹಾರಕ್ಕೆ ಹೋದ ಸ್ಥಳೀಯರು ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೀಣ್ಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link