ಬೆಂಗಳೂರು
ಕೇರಳದಲ್ಲಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ಬೆಂಗಳೂರಿನಿಂದ ವೇಗವಾಗಿ ಹೋಗುತ್ತಿದ್ದ ಮೂವರಿದ್ದ ಕಾರು ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಆನೇಕಲ್ ಗಡಿಗೆ ಹೊಂದಿಕೊಂಡಿರುವ ಸುಳಗಿರಿಯ ಚಿನ್ನಾರ ಬಳಿ ನಡೆದಿದೆ.
ಕೇರಳ ಮೂಲದ ಚಾಲಕ ಹರೀಶ್ ಹಾಗೂ ಪ್ರಭು ಮೃತ ದುರ್ದೈವಿಗಳಾಗಿದ್ದಾರೆ. ದೀಪಕ್ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ತಮಿಳುನಾಡು ರಾಷ್ಟ್ರೀಯ ಹೆದ್ದಾರಿ ಸೂಳಗಿರಿಯ ಚಿನ್ನೂರಿನ ಬಳಿ ಶನಿವಾರ ತಡರಾತ್ರಿ ಅಪಘಾತ ಸಂಭವಿಸಿದೆ.ಕೇರಳದಲ್ಲಿ ಸ್ನೇಹಿತನೊಬ್ಬನ ಹುಟ್ಟುಹಬ್ಬವನ್ನು ಭಾನುವಾರ ಆಚರಿಸಲು ನಿರ್ಧರಿಸಿದ್ದರು. ಹೀಗಾಗಿ ಶನಿವಾರ ರಾತ್ರಿ ಐದು ಜನ ಕಾರಿನಲ್ಲಿ ಬೆಂಗಳೂರಿನಿಂದ ಹೊರಟಿದ್ದರು. ಹೊರಡುವ ಮುನ್ನ ಐವರೂ ಕಂಠಮಟ್ಟ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ.
ಚಾಲಕ ಹರೀಶ್ ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡುತ್ತಿದ್ದ. ಎದುರಿಗೆ ಹೋಗುತ್ತಿದ್ದ ಲಾರಿಯನ್ನು ಗಮನಿಸದೆ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ. ಅತಿ ವೇಗವಾಗಿ ಚಾಲನೆ ಮಾಡುತ್ತಿದ್ದುದರಿಂದ ಕಾರು ಸಂಪುರ್ಣ ಅಪ್ಪಚ್ಚಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಉಳಿದಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ಹೇಳಾಗಿದೆ. ಕೃಷ್ಣಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








