ಮಂಡ್ಯ :
ಶಾಲೆಯ ನೀರಿನ ಟ್ಯಾಂಕಿಗೆ ದುಷ್ಕರಿಮಿಗಳು ವಿಷ ಬೆರೆಸಿದ್ದು ನೀರು ಸೇವಿಸಿದ 11 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ಮಂಡ್ಯ ತಾಲೂಕಿನ ಎ.ಹುಲ್ಕೆರೆ ಗ್ರಾಮದ ಶಾಲೆಯ ನೀರಿನ ಟ್ಯಾಂಕಿಗೆ ವಿಷ ಬೆರೆಕೆಯಾಗಿದ್ದು, ವಿಷಯುಕ್ತ ನೀರನ್ನು ಸೇವನೆ ಮಾಡಿದ ಕಾರಣದಿಂದ 10 ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದು, ಅದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಶಾಲೆಯಲ್ಲಿರುವ ನೀರಿನ ಟ್ಯಾಂಕಿಗೆ ಯಾರೋ ದುಷ್ಕರ್ಮಿಗಳು ವಿಷ ಬೆರೆಸಿದ್ದಾರೆ. ಈ ವಿಷಯ ಅರಿಯದ ಮಕ್ಕಳು ನೀರು ಕುಡಿದ ಪರಿಣಾಮ ಅಸ್ವಸ್ಥಗೊಂಡಿದ್ದಾರೆ.
ಅಸ್ವಸ್ಥರಾಗಿರುವ ಮಕ್ಕಳನ್ನು ಕೊತ್ತತ್ತಿ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನೀರಿನ ಟ್ಯಾಂಕಿಗೆ ವಿಷ ಹಾಕಿರುವ ದುಷ್ಕರ್ಮಿಗಳನ್ನು ಬಂಧಿಸುವಂತೆ ಪಾಲಕರು, ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ