ಪಾವಗಡ
ತಾಲ್ಲೂಕಿನ ಜನತೆಯಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇಕೋ ಕ್ಲಬ್‍ಗಳನ್ನು ತೆರೆಯಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಗಂಗಯ್ಯ ತಿಳಿಸಿದರು.
ಅವರು ಸೋಮವಾರ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ತುಮಕೂರು, ಮಧುಗಿರಿ ಮತ್ತು ಪಾವಗಡ ವಿಜ್ಞಾನ ಕೇಂದ್ರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಜಾಗತಿಕ ತಾಪಮಾನ ಏರಿಕೆ ಹಾಗೂ ಜಲಶಕ್ತಿ ಅಭಿಯಾನದ ಅಂಗವಾಗಿ ಸೋಮವಾರ ನಡೆದ ಇಕೋ ಕ್ಲಬ್‍ಗಳ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರೌಢÀಶಾಲೆಗಳಲ್ಲಿ ಚಿತ್ರಕಲೆ, ರಸಪ್ರಶ್ನೆ, ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ. ಸಾರ್ವಜನಿಕ ರಲ್ಲಿ ಗಿಡಮರಗಳನ್ನು ನೆಡುವ, ಸಂರಕ್ಷಣೆ ಮಾಡುವ ದೃಷ್ಟಿಯಿಂದ ಮಳೆಯಾಗಬೇಕೆಂದರೆ ಪ್ರಕೃತಿ ಸಂರಕ್ಷಣೆ ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಿ ಎಲ್ಲರೂ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕೆಂದರು.
ರಾಜ್ಯ ವಿಜ್ಞಾನ ಪರಿಷತ್ ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಕ ಎಂ.ಗಂಗಾಧರಪ್ಪ ಮಾತನಾಡಿ, ರಾಜ್ಯ ಮಟ್ಟದಲ್ಲಿ ಆಯ್ದ ಪ್ರೌಢಶಾಲೆಗಳಲ್ಲಿ ಪ್ರತಿ ವರ್ಷ ಇಕೋ ಕ್ಲಬ್‍ಗಳನ್ನು ನಡೆಸಲು ಐದು ಸಾವಿರ ರೂ. ಅನುದಾನ ನೀಡುತ್ತಿದ್ದು, ಪರಿಸರ ಸಂರಕ್ಷಣೆಗೆ ಒತ್ತು ನೀಡಿರುವ ಸರ್ಕಾರವು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಇದನ್ನು ನಡೆಸುತ್ತಿದೆ ಎಂದರು.
ಜಲ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರು ತಿಳಿಯಬೇಕಾಗಿದೆ. ಜಾಗತಿಕ ಉಷ್ಣತೆ ಹೆಚ್ಚಾಗುತ್ತಿದ್ದು, ಇದಕ್ಕೆ ಕಾರಣವೇನೆಂಬುದನ್ನು ಅಧ್ಯಯನ ಮಾಡಿ ವರದಿಯನ್ನು ನೀಡಬೇಕಾಗಿದೆ. ಮಕ್ಕಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಪರಿಸರದ ಜಾಗೃತಿಗಾಗಿ ಜಾಥಾ ಮತ್ತು ಅಧ್ಯಯನಗಳನ್ನು ಮಾಡಬೇಕಿದೆ ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಬಿಆರ್‍ಸಿ ಪವನ್ ಕುಮಾರ್ ರೆಡ್ಡಿ, ಆದರ್ಶ ಶಾಲೆಯ ಮುಖ್ಯ ಶಿಕ್ಷಕರಾದ ವೆಂಕಟೇಶ್ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
