ಮುಂಬೈಗೆ ಹೋಗುತ್ತಿದ್ದ ರೋಷನ್ ಬೇಗ್ SIT ವಶಕ್ಕೆ!!

ಬೆಂಗಳೂರು :

     ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಶಿವಾಜಿನಗರ ಶಾಸಕ ಆರ್.ರೋಷನ್ ಬೇಗ್ ಅವರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ.

      ಐಎಂಎ ವಂಚನೆ ಪ್ರಕರಣದಲ್ಲಿ ಐಎಂಎ ಮಾಲೀಕ ಮನ್ಸೂರ್ ಖಾನ್, ಹಲವು ಬಾರಿ ರೋಷನ್ ಬೇಗ್ ಹೆಸರನ್ನು ಪ್ರಸ್ತಾಪಿಸಿದ್ದು, ವಿಚಾರಣೆಗೆ ಹಾಜರಾಗಲು ರೋಷನ್ ಬೇಗ್ ಅವರಿಗೆ ಎಸ್‌ ಐಟಿ ನೋಟಿಸ್ ನೀಡಿತ್ತು. ಆದರೆ ಕಾರಣ ನೀಡಿ ವಿಚಾರಣೆಗೆ ಅವರು ಹಾಜರಾಗಿರಲಿಲ್ಲ. 

      ಆದರೆ ಅವರು ನಿನ್ನೆ ರಾತ್ರಿ ಬೆಂಗಳೂರು ಬಿಟ್ಟು ಮುಂಬೈಗೆ ಹೋಗುತ್ತಿದ್ದ ವಿಚಾರ ತಿಳಿದ ಎಸ್ ಐ ಟಿ ಅಧಿಕಾರಿಗಳ ತಂಡ ಸೋಮವಾರ ರಾತ್ರಿ 10:30 ಸುಮಾರಿಗೆ ಕಾರ್ಯಾಚರಣೆ ನಡೆಸಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ.

     ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್, 24 ಗಂಟೆಯೊಳಗೆ ಭಾರತಕ್ಕೆ ವಾಪಸ್ಸು ಬರುವುದಾಗಿ ವಿಡಿಯೋ ಮೂಲಕ ಸಂದೇಶಯೊಂದನ್ನು ರವಾನಿಸಿದ್ದ. ತದನಂತರ ರೋಷನ್ ಬೇಗ್, ಗೌಪ್ಯ ಸ್ಥಳಕ್ಕೆ ತೆರಳಲು ಮುಂದಾಗಿರುವ ಬಗ್ಗೆ ಮಾಹಿತಿ ಆಧಾರಿಸಿ, ಸಿಟ್ ಅವರನ್ನು ವಶಕ್ಕೆ ಪಡೆದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link