ಬೆಂಗಳೂರು
ಕಾರಿನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ 250 ಕೆಜೆ ಗಾಂಜಾವನ್ನು ವಶಪಡಿಸಿಕೊಂಡು ಭರ್ಜರಿ ಬೇಟೆಯಾಡಿರುವ ಅತ್ತಿಬೆಲೆ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ಮಧುರೈ ಮೂಲದ ಕುಮಾರ್ ಬಂಧಿತ ಆರೋಪಿಯಾಗಿದ್ದು ಕಾರಿನಲ್ಲಿದ್ದ ಮತ್ತೊರ್ವ ಆರೋಪಿ ಪರಾರಿಯಾಗಿದ್ದು ಆತನ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.ಮಾರುತಿ ಸ್ವಿಫ್ಟ್ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಅತ್ತಿಬೆಲೆ ಪೊಲೀಸರು ಕಾರನ್ನು ಬೆನ್ನಟ್ಟಿ ದಾಳಿ ನಡೆಸಿ ಆರೋಪಿಯೊಬ್ಬನನ್ನು ಬಂಧಿಸಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಆರೋಪಿಯಿಂದ 125 ಪ್ಯಾಕೆಟ್‍ನಲ್ಲಿದ್ದ 250 ಕೆ.ಜಿ. ಗಾಂಜಾ ಹಾಗೂ ಆಂಧ್ರ, ಕೇರಳ, ತಮಿಳುನಾಡು ಹಾಗೂ ಕರ್ನಾಟಕದ ನಂಬರ್ ಪ್ಲೇಟ್ ವಶಕ್ಕೆ ಪಡಿಸಿಕೊಳ್ಳಲಾಗಿದೆ.ಆರೋಪಿಗಳು ಯಾವ ರಾಜ್ಯಕ್ಕೆ ಹೋಗುತ್ತಿದ್ದರೋ ಅಲ್ಲಿನ ನಂಬರ್ ಪ್ಲೇಟ್‍ನ್ನು ಬದಲಿಸಿ ಕಾರಿಗೆ ಅಳವಡಿಸುತ್ತಿದ್ದರು ನಂಬರ್ ಪ್ಲೇಟ್ ಬದಲಾಯಿಸಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗುತ್ತಿದ್ದು ಆರೋಪಿಯನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
