ಪರೇಶ್‌ ಮೇಸ್ತಾ ಪ್ರಕರಣದಲ್ಲಿ ಭಾರಿ ಟ್ವಿಸ್ಟ್..!

ಬೆಂಗಳೂರು:  

     ಹೊನ್ನವರದಲ್ಲಿ ನಡೆದಿದ್ದ ಕೋಮುಗಲಭೆಗೆ ಕಾರಣವಾಗಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಬಹುತೇಕ ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ 112 ಜನರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

     ಗಲಭೆಯಲ್ಲಿ 112 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯಲು ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೋಮುಗಲಭೆಗೆ ಸಂಬಂಧಿಸಿದಂತೆ 112 ಮಂದಿ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

     2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಮೇಸ್ತಾ (19) ಎಂಬ ಯುವಕ ಶವವಾಗಿ ಪತ್ತೆಯಾಗಿದ್ದ. ಡಿಸೆಂಬರ್ 8 ರಂದು ಹೊನ್ನಾವರದ ಶೆಟ್ಟಿಕೆರೆಯ ಕೆರೆಯಲ್ಲಿ ಆತನ ಮೃತದೇಹ ಕಂಡುಬಂದಿತ್ತು. ಇದಕ್ಕೆ ಕೋಮು ಬಣ್ಣ ಕಟ್ಟಿದ್ದರಿಂದ ರಾಜ್ಯದಲ್ಲಿ ಉದ್ವಿಗ್ನತೆ ಉಂಟಾಗಿತ್ತು.

    ಇದೊಂದು ಕೊಲೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು, ಬಜರಂಗದಳ ಹಾಗೂ ಸ್ಥಳೀಯ ಶಾಸಕರು ಸೇರಿದಂತೆ ಬಲಪಂಥೀಯ ಸಂಘಟನೆಗಳು ಮೇಸ್ತಾ ಸಾವಿನ ವಿರುದ್ಧ ಪ್ರತಿಭಟನೆ ನಡೆಸಿದ್ದವು. ಶಾಸಕ ಹಾಗೂ ಹಾಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಬಜರಂಗದಳ ಕಾರ್ಯಕರ್ತರು ಹಾಗೂ ಇತರರ ವಿರುದ್ಧವೂ ಪ್ರಕರಣ ದಾಖಲಾಗಿತ್ತು.

     ಇದೀಗ, ಗಲಭೆಗೆ ಸಂಬಂಧಿಸಿದ ಎಲ್ಲಾ 112 ಜನರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಆದೇಶಿಸಿದೆ. ಕಳೆದ ವರ್ಷ, ಕೇಂದ್ರೀಯ ತನಿಖಾ ದಳ (ಸಿಬಿಐ) ಮೆಸ್ತಾ ಪ್ರಕರಣದ ಕುರಿತು ‘ಬಿ’ ರಿಪೋರ್ಟ್ ಸಲ್ಲಿಸಿತು. ಮೇಸ್ತಾ ಸಾವು ಆಕಸ್ಮಿಕ ಎಂದು ಘೋಷಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap