ರೈಲ್ವೆ ಇಲಾಖೆಯಲ್ಲಿ ಆಯ್ತು ಐತಿಹಾಸಿಕ ನೇಮಕಾತಿ….!

ನವದೆಹಲಿ:

     ರೈಲ್ವೆ ಮಂಡಳಿಯ ಸಿಇಒ ಮತ್ತು ಅಧ್ಯಕ್ಷರನ್ನಾಗಿ ಜಯಾ ವರ್ಮಾ ಸಿನ್ಹಾ ನೇಮಕ ಮಾಡಿದ್ದು, ರೈಲ್ವೆ ಸಚಿವಾಲಯದ 105 ವರ್ಷಗಳ ಇತಿಹಾಸದಲ್ಲಿ ಆ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

     ಈ ಮೂಲಕ ರೈಲ್ವೆ ಇತಿಹಾಸದಲ್ಲಿ ಈ ಹುದ್ದೆಗೇರಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜಯ ಸಿನ್ಹಾ ಅವರು ಸೆಪ್ಟೆಂಬರ್ 1 ರಂದು ಅಥವಾ ನಂತರ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಸರ್ಕಾರ ಹೇಳಿದೆ.

     ಭಾರತೀಯ ರೈಲ್ವೆ ನಿರ್ವಹಣಾ ಸೇವೆಗಳು , ಸದಸ್ಯ (ಕಾರ್ಯಾಚರಣೆ ಮತ್ತು ವ್ಯಾಪಾರ ಅಭಿವೃದ್ಧಿ), ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಹುದ್ದೆಗೆ ಜಯ ವರ್ಮಾ ಸಿನ್ಹಾ ಅವರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ವರದಿ ಹೇಳಿದೆ.

 
     ಜಯ ವರ್ಮಾ ಸಿನ್ಹಾ ಅವರು ಭಾರತೀಯ ರೈಲ್ವೆ ಸಂಚಾರ ಸೇವೆಯ 1986 ರ ಬ್ಯಾಚ್ ಅಧಿಕಾರಿ. ಅವರು ಪ್ರಸ್ತುತ ರೈಲ್ವೆ ಮಂಡಳಿಯಲ್ಲಿ ಸದಸ್ಯ (ಕಾರ್ಯಾಚರಣೆ ಮತ್ತು ವ್ಯವಹಾರ ಅಭಿವೃದ್ಧಿ) ಸ್ಥಾನವನ್ನು ಹೊಂದಿದ್ದಾರೆ. ಸಿನ್ಹಾ ಅವರು ರೈಲ್ವೇ ಮಂಡಳಿಯ (ಸಂಚಾರ ಸಾರಿಗೆ) ಹೆಚ್ಚುವರಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
     ಅಲಹಾಬಾದ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಯಾದ ಜಯಾ ವರ್ಮಾ ಸಿನ್ಹಾ ಅವರು 1988 ರಲ್ಲಿ ಭಾರತೀಯ ರೈಲ್ವೆ ಸಂಚಾರ ಸೇವೆ ಗೆ ಸೇರಿದ್ದರು. ಉತ್ತರ ರೈಲ್ವೆ, ಆಗ್ನೇಯ ರೈಲ್ವೆ ಮತ್ತು ಪೂರ್ವ ರೈಲ್ವೆ ಹೀಗೆ ಮೂರು ರೈಲ್ವೆ ವಲಯಗಳಲ್ಲಿ ಕೆಲಸ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap