ಶ್ರೀರಂಗಪಟ್ಟಣ : ತಾಲೂಕು ಕಸಾಪ ಅಧ್ಯಕ್ಷರಾಗಿ ರೌಡಿಶೀಟರ್

ಮಂಡ್ಯ

   ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ರೌಡಿಶೀಟರ್ ದೀಪು ಕೊಲೆ ಕೇಸ್​ನ 24ನೇ ಆರೋಪಿ ಎಂ.ಬಿ.ಕುಮಾರ್ ಆಯ್ಕೆ ಆಗಿದ್ದಾರೆ. ಶಾಸಕರ ಒತ್ತಡಕ್ಕೆ ಮಣಿದು ಎಂ.ಬಿ.ಕುಮಾರ್​ಗೆ ಕಸಾಪ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎನ್ನಲಾಗುತ್ತಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ ​​ ನಡೆಗೆ ಸಾಹಿತ್ಯಾಸಕ್ತರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

   ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಡಿಸೆಂಬರ್‌ನಲ್ಲಿ ನಡೆಯುವ ನುಡಿಜಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಕೊಲೆ ಆರೋಪಿಗೆ‌ ಅಧ್ಯಕ್ಷ ಸ್ಥಾನ ನೀಡಿ ಕಸಾಪ ಎಡವಟ್ಟು ಮಾಡಿಕೊಂಡಿದೆ. ಶಾಸಕನ ಒತ್ತಡಕ್ಕೆ ಮಣಿದ ಕನ್ನಡ ಸಾಹಿತ್ಯ ಪರಿಷತ್ ಕೊಲೆ ಆರೋಪಿಯನ್ನು ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ಆಯ್ಕೆ ಮಾಡಿದೆ. 2015ರ ಜನವರಿ 3ರಂದು ರೌಡಿಶೀಟರ್ ದೀಪು ಹತ್ಯೆ ನಡೆದಿತ್ತು. ಈ ಪ್ರಕರಣದಲ್ಲಿ ಎಂ.ಬಿ.ಕುಮಾರ್ 24ನೇ ಆರೋಪಿಯಾಗಿದ್ದರು. ಸದ್ಯ ಜಾಮೀನಿನ ಮೇಲೆ ಹೊರಗಿದ್ದು ವಿಚಾರಣೆ ಎದುರಿಸುತ್ತಿದ್ದಾರೆ.

   ಕುಮಾರ್ ಹಿನ್ನೆಲೆ ಗೊತ್ತಿದ್ದರೂ ಆತನ ಪರವಾಗಿ ಶಾಸಕರು ಶಿಫಾರಸು ಮಾಡಿದ್ದಾರೆ. ಕುಮಾರ್​ನನ್ನು ಶ್ರೀರಂಗಪಟ್ಟಣ ಕಸಾಪ ಅಧ್ಯಕ್ಷರನ್ನಾಗಿ ಮಾಡಲು ಶ್ರೀರಂಗಪಟ್ಟಣ ಕ್ಷೇತ್ರದ ‘ಕೈ’ ಶಾಸಕ ರಮೇಶ್​ ಬಂಡಿಸಿದ್ದೇಗೌಡ ಪತ್ರ ಬರೆದಿದ್ದಾರೆ. ಶಾಸಕರ ಒತ್ತಡಕ್ಕೆ ಮಣಿದ ಕಸಾಪ ಎಂ.ಬಿ.ಕುಮಾರ್​ಗೆ ತಾಲೂಕು ಅಧ್ಯಕ್ಷ ಸ್ಥಾನ ನೀಡಿದೆ. ಕನ್ನಡ ಸಾಹಿತ್ಯ ಪರಿಷತ್​​ ನಡೆಗೆ ಸಾಹಿತ್ಯಾಸಕ್ತರಿಂದ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ತಾಲೂಕು ಅಧ್ಯಕ್ಷ ಸ್ಥಾನದಿಂದ ಎಂ.ಬಿ.ಕುಮಾರ್​ ಕೆಳಗಿಳಿಸಲು ಆಗ್ರಹ ಕೇಳಿ ಬಂದಿದೆ. ಸದ್ಯ ದಾಖಲೆ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದ್ದಾರೆ.

Recent Articles

spot_img

Related Stories

Share via
Copy link
Powered by Social Snap