ಬೆಂಗಳೂರು :
ರಾಜ್ಯದಲ್ಲಿ ಶಾಲೆ ಆರಂಭದ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಜನವರಿ 29 ರವರೆಗೆ 10 ನೇ ತರಗತಿಯಿಂದ ಪಿಯುಸಿ ಹೊರತುಪಡಿಸಿ ಉಳಿದ ವಿದ್ಯಾರ್ಥಿಗಳ ತರಗತಿಗಳನ್ನು ಬಂದ್ ಮಾಡಲು ಹಾಗೂ ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೆ ಬರುವಂತೆ ಶಾಲಾ ಕಾಲೇಜುಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ರಾಜ್ಯ ಸರ್ಕಾರದ ನಿರ್ಧಾರದ ಪ್ರಕಾರ ಬೆಂಗಳೂರು ಹೊರತುಪಡಿಸಿ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾದರೂ ಸೋಂಕು ಪ್ರಕರಣ ವರದಿಯಾದ ಶಾಲೆಯನ್ನು ಮಾತ್ರ 3 ರಿಂದ 7 ದಿನಗಳ ಕಾಲ ತಾತ್ಕಾಲಿಕವಾಗಿ ಮುಚ್ಚಬೇಕು. ಬಳಿಕ ಪುನರ್ ಆರಂಭ ಮಾಡಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ನಿರ್ದಿಷ್ಟ ಶಾಲೆಯನ್ನು ಒಂದು ಘಟಕವನ್ನಾಗಿ ಪರಿಗಣಿಸಿ ಶಾಲೆಯಲ್ಲಿ 5 ಕ್ಕಿಂತ ಕಡಿಮೆ ಸೋಂಕು ಪ್ರಕರಣ ವರದಿಯಾದರೆ 3 ದಿನ, 20-30 ಕ್ಕೂ ಹೆಚ್ಚು ಪ್ರಕರಣ ವರದಿಯಾದರೆ 7 ದಿನ ಮುಚ್ಚಲಾಗುವುದು. ಬಳಿಕ ಎಂದಿನಂತೆ ಶಾಲೆಯನ್ನು ತೆರೆದು ತರಗತಿಗಳನ್ನು ನಡೆಸಬೇಕು ಎಂದು ಸೂಚಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ