ಬೆಂಗಳೂರು:
ಅನುದಾನಿತ ಶಾಲಾ ಕಾಲೇಜು ನೌಕರರಿಗೆ ಪಿಂಚಣಿ ಸೌಲಭ್ಯ ಒದಗಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 4 ರಂದು ರಾಜ್ಯದಾದ್ಯಂತ ಅನುದಾನಿತ ಶಾಲಾ ಕಾಲೇಜುಗಳು ಬಂದ್ ಮಾಡಲು ಶಾಲಾ ಕಾಲೇಜು ನೌಕರರ ಸಂಘ ಮುಂದಾಗಿದೆ.
ಫ್ರೀಡಂ ಪಾರ್ಕ್ನಿಂದ ಜಾಥಾ ನಡೆಸಲು ನಿರ್ಧಾರ
ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಡಿ.ಸಿ ಗೋಪಿನಾಥ್ , ಕಳೆದ 2014ರಿಂದಲ್ಲೂ ಅನೇಕ ಮನವಿಯನ್ನ ಸಲ್ಲಿಸಿದ್ದರೂ, ಹೋರಾಟಗಳನ್ನ ನಡೆಸಿದ್ದರೂ ಸರ್ಕಾರ ನಿರ್ಲಕ್ಷ್ಯವಹಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.
ಅನುದಾನಿತ ಶಾಲಾ-ಕಾಲೇಜು ನೌಕರರು ಬೇಡಿಕೆ ಏನು?
ನೌಕರರ ಪ್ರಮುಖ ಬೇಡಿಕೆಗಳಾದ 2006ಕ್ಕೂ ಮೊದಲು ನೇಮಕವಾಗಿ ನಂತರ ಅನುದಾನಕ್ಕೊಳಪಟ್ಟ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ನಿವೃತ್ತರಾಗಿರುವ ನೌಕರರ ಸೇವಾ ಅವಧಿಯನ್ನ ಕಾಲ್ಪನಿಕವಾಗಿ ಪರಿಗಣಿಸಿ, ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡುವುದು.
ಅನುದಾನಿತ ಶಾಲಾ ಮಕ್ಕಳಿಗೂ ಕೆಲ ಸೌಲಭ್ಯ ನೀಡಿ
ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೂ ಆರೋಗ್ಯ ಸಿರಿ ( ಜ್ಯೋತಿ ಸಂಜೀವಿನಿ) ಯೋಜನೆಯನ್ನ ಜಾರಿಗೆ ತರಬೇಕು. ಖಾಲಿ ಹುದ್ದೆಗಳನ್ನ ತುಂಬಿಕೊಳ್ಳಲು ವಿಧಿಸಿರುವ ನಿಯಮಗಳನ್ನ ಸಡಿಲಗೊಳಿಸಬೇಕು. ಸರ್ಕಾರಿ ಶಾಲಾ ಮಕ್ಕಳಿಗೆ ನೀಡುತ್ತಿರುವ ಸೌಲಭ್ಯಗಳನ್ನ ಅನುದಾನಿತ ಶಾಲಾ ಮಕ್ಕಳಿಗೂ ನೀಡಬೇಕೆಂದು ಮನವಿ ಮಾಡಿದ್ದಾರೆ.
ಬೃಹತ್ ಪ್ರತಿಭಟನೆ ಮೂಲಕ ಬಿಸಿ ಮುಟ್ಟಿಸೋ ಯತ್ನ
ಈ ಬಾರಿ ಅನುದಾನಿತ ಶಾಲಾ -ಕಾಲೇಜು ನೌಕರರು ವಿವಿಧ ಬೇಡಿಕೆಗಳ ಈಡೇರಿಕೆ ಪಟ್ಟು ಹಿಡಿದಿದ್ದಾರೆ ಏನೇ ಆದ್ರೂ ಪಟ್ಟು ಬಿಡಲ್ಲ ಅಂತಿದ್ದಾರೆ. ಅನೇಕ ಬಾರಿ ಮನವಿ ಮಾಡಿದ್ರು ಪ್ರಯೋಜನವಾಗಿಲ್ಲ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ.
ಅನುದಾನಿತ ಶಾಲಾ-ಕಾಲೇಜಿಗಷ್ಟೆ ರಜೆ
ಮಾರ್ಚ್ 4 ರಂದು ರಾಜ್ಯಾದ್ಯಂತ ಅನುದಾನಿತ ಶಾಲೆ-ಕಾಲೇಜಿಗಷ್ಟೆ ರಜೆ ನೀಡಲಾಗಿದೆ. ಉಳಿದಂತೆ ಸರ್ಕಾರಿ ಶಾಲೆಗಳು ಸೇರಿದಂತೆ ಖಾಸಗಿ ಶಾಲಾ, ಕಾಲೇಜಿನ ಮಕ್ಕಳಿಗೆ ಎಂದಿನಂತೆ ತರಗತಿಗಳು ನಡೆಯಲಿವೆ.