ಬೆಂಗಳೂರು
ಅರಕಲಗೂಡು ಕ್ಷೇತ್ರದ ಶಾಸಕ ಎ. ಟಿ. ರಾಮಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಲವು ದಿನಗಳಿಂದ ಹಬ್ಬಿತ್ತು. ಅಂತಿಮವಾಗಿ ಇಂದು ವಿಧಾನಸಭೆ ಸ್ಪೀಕರ್ ಭೇಟಿಯಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ರಾಜ್ಯದ 224 ಕ್ಷೇತ್ರಗಳಿಗೆ ಮೇ 10ರ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಪಕ್ಷ ತೊರೆಯುವ ನಾಯಕರ ಸಂಖ್ಯೆಯೂ ಹೆಚ್ಚಾಗುತ್ತಿದೆ.
2018ರ ಚುನಾವಣೆಯಲ್ಲಿ ಎ. ಟಿ. ರಾಮಸ್ವಾಮಿ 85,064 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. 74,411 ಮತಗಳನ್ನು ಪಡೆದ ಕಾಂಗ್ರೆಸ್‌ನ ಎ. ಮಂಜು ಸೋಲಿಸಿದ್ದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಚಿತ್ರಣವೇ ಬದಲಾಗಿದೆ, ಎ. ಮಂಜು ಜೆಡಿಎಸ್ ಸೇರಿದ್ದಾರೆ. ಅರಕಲಗೂಡು ಕ್ಷೇತ್ರಕ್ಕೆ ಈ ಬಾರಿಯ ಚುನಾವಣೆಗೆ ಅವರೇ ಜೆಡಿಎಸ್ ಅಭ್ಯರ್ಥಿ. ಕ್ಷೇತ್ರದ ಹಾಲಿ ಶಾಸಕ ಎ. ಟಿ. ರಾಮಸ್ವಾಮಿ ಕಾಂಗ್ರೆಸ್ ಸೇರಲಿದ್ದು, ಕಾಂಗ್ರೆಸ್ ಟಿಕೆಟ್ ಪಡೆಯುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ