ಬಾಡಿಗೆ ಮನೆಯಲ್ಲಿ ಪ್ರಿಯಕರನ ಜೊತೆ ಆತ್ಮಹತ್ಯೆಗೆ ಶರಣಾದ ಮಹಿಳೆ

ದೇವನಹಳ್ಳಿ:

           ಮದುವೆಯಾಗಿದ್ದ ಮಹಿಳೆ, ಪ್ರಿಯಕರ ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಶಾಂತಿನಗರದ ಮನೆಯಲ್ಲಿ ನಡೆದಿದೆ.

         ರಾಯಚೂರಿನ ಬಸವರಾಜ್(28), ಜ್ಯೋತಿ(26) ಆತ್ಮಹತ್ಯೆ ಮಾಡಿಕೊಂಡವರು.

ಆತ್ಮಹತ್ಯೆ ಮಾಡಿಕೊಂಡ ಜ್ಯೋತಿ ಮದುವೆಯಾದ ನಂತರವು ಸಂಬಂಧಿಕನಾಗಿದ್ದ ಬಸವರಾಜ್ ಜೊತೆ ಪ್ರೀತಿಯಲ್ಲಿದ್ದರು. ಪ್ರೀತಿಯಿಂದಾಗಿ ಮನೆಬಿಟ್ಟು ಪ್ರಿಯಕರನ ಜೊತೆ ಬಂದಿದ್ದರು. ಆದ್ರೆ ಈಗ ಜ್ಯೋತಿ ಹಾಗೂ ಆಕೆಯ ಪ್ರಿಯಕರ ಇಬ್ಬರೂ ನೇಣಿಗೆ ಶರಣಾಗಿದ್ದಾರೆ. ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

20 ದಿನಗಳಿಂದಷ್ಟೆ ಗಂಡ ಹೆಂಡತಿ ಅಂತ ಹೇಳಿ ಬಸವರಾಜ್ ಮತ್ತು ಜ್ಯೋತಿ ಮನೆ ಬಾಡಿಗೆಗೆ ಪಡೆದುಕೊಂಡಿದ್ರು. ಆದ್ರೆ ಬಾಡಿಗೆ ಮನೆಯಲ್ಲೆ ಕಳೆದ ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಿಂದ ದುರ್ವಾಸನೆ ಬರ್ತಿದ್ದನ್ನ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಹಿನ್ನೆಲೆ ಸ್ಥಳಕ್ಕೆ ಬಂದ ದೇವನಹಳ್ಳಿ ಪೊಲೀಸರು ಮನೆ ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈದ್ಯನ ಮನೆಗೆ ನುಗ್ಗಿ ದರೋಡೆ

ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ವೈದ್ಯ ರಾಜಕುಮಾರ್ ಮನೆಗೆ ನುಗ್ಗಿ ಚಾಕು, ಗನ್ ತೋರಿಸಿ ದರೋಡೆ ಮಾಡಲಾಗಿದೆ. ವೈದ್ಯನ ಅಳಿಯ, ಮಗಳ ಕತ್ತಿನಲ್ಲಿದ್ದ ಚಿನ್ನದ ಸರಗಳು, ನಗದು ದೋಚಿ ನಾಲ್ವರು ದರೋಡೆಕೋರರು ಪರಾರಿಯಾಗಿದ್ದಾರೆ. ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೈರ್ ಸ್ಫೋಟಗೊಂಡು ಕಾರು ಅಪಘಾತ, ಇಬ್ಬರ ದುರ್ಮರಣ

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಸೇತುವೆ ಬಳಿ ಭೀಕರ ಅಪಘಾತ ಸಂಭವಿಸಿದೆ.ಟೈರ್ ಸ್ಫೋಟಗೊಂಡು ಕಾರು ಅಪಘಾತವಾಗಿದ್ದು ಕಾರಿನಲ್ಲಿದ್ದ ರಾಜಶೇಖರ್, ಮಣಿಕಂಠ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap