ನವದೆಹಲಿ:
ದೆಹಲಿಯಲ್ಲಿ ಶನಿವಾರ ಚುನಾವಣಾ ಫಲಿತಾಂಶ ಹೊರ ಬೀಳಲಿದ್ದು, ಮತ ಎಣಿಕೆ ಪ್ರಾರಂಭವಾಗಿದೆ. ಸದ್ಯ ಆಮ್ ಆದ್ಮಿ ಪಕ್ಷ ಹಾಗೂ ಭಾರತೀಯ ಜನತಾ ಪಕ್ಷದಲ್ಲಿ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆ. ಒಟ್ಟು 70 ವಿಧಾನ ಸಭಾ ಕ್ಷೇತ್ರದಲ್ಲಿ 41 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ, ಆಮ್ ಆದ್ಮಿ ಪಕ್ಷ 27 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಬೆಳಿಗ್ಗೆ ಎಂಟು ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಈಗಾಗಲೇ ತೀವೃ ಹಿನ್ನಡೆ ಸಾಧಿಸಿದ್ದ ಅರವಿಂದ್ ಕೇಜ್ರಿವಾಲ್ ಅವರು ಇದೀಗ ನವದೆಹಲಿ ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಹತ್ತು ವರ್ಷದಿಂದ ಅಧಿಕಾರದಲ್ಲಿರುವ ಆಪ್‌ಗೆ ಬಿಜೆಪಿ ಬಿಗ್ ಶಾಕ್ ನೀಡುತ್ತಿದೆ.
ಈಗಾಗಲೇ ಬಿಜೆಪಿ ಮುನ್ನಡೆಯನ್ನು ಸಾಧಿಸಿಕೊಂಡು ಬಂದಿದ್ದು, 27 ವರ್ಷಗಳ ನಂತರ ಅಧಿಕ್ಕಾರಕ್ಕೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ದೆಹಲಿ ಸಿಎಂ ಅತಿಶಿ ಕಲ್ಕಾಜಿ ಕ್ಷೇತ್ರದಿಂದ ಹಿನ್ನಡೆಯನ್ನು ಅನುಭವಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಿನಿಂದಲೂ ಹಿನ್ನಡೆ ಅನುಭವಿಸಿದ್ದ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಜಂಗ್‌ಪುರ್‌ನಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಸದ್ಯ ಅಬಕಾರಿ ಹಗರಣದ ಮುಖ್ಯ ಆರೋಪಿ ಸತ್ಯೇಂದರ್ ಜೈನ್ ಹಿನ್ನಡೆಯಲ್ಲಿದ್ದಾರೆ. ತೀವೃ ಕುತೂಹಲ ಕೆರಳಿಸಿದ್ದ ನವದೆಹಲಿ ಕ್ಷೇತ್ರದಲ್ಲಿ ಸದ್ಯ ಅರವಿಂದ್ ಕೇಜ್ರಿವಾಲ್ ಮುನ್ನಡೆಯನ್ನು ಸಾಧಿಸಿದ್ದು, ಬಿಜೆಪಿಯ ಪರವೇಶ್ ವರ್ಮಾ ಹಿನ್ನಡೆಯನ್ನು ಅನುಭವಿಸಿದ್ದಾರೆ.
ಸದ್ಯ 41 ಕ್ಷೇತ್ರಳಲ್ಲಿ ಮುನ್ನಡೆಯನ್ನು ಸಾಧಿಸಿರುವ ಬಿಜೆಪಿ ಪಾಳಯದಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಖುಷಿ ಪಡುತ್ತಿದ್ದಾರೆ.
