ಬಿಜೆಪಿ ಕೇಂದ್ರ ನಾಯಕರಿಗೆ ಆಪ್‌ ಸವಾಲ್…!

ಬೆಂಗಳೂರು

         ಆಮ್‌ ಆದ್ಮಿ ಪಾರ್ಟಿ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಸುದ್ದಿಗಾರರ ಬಳಿ ಮಾತನಾಡಿ, ಅಭಿವೃದ್ಧಿ ಕಾರ್ಯಗಳ ನೆಪದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಪದೇಪದೇ ಕರ್ನಾಟಕಕ್ಕೆ ಬಂದು ಚುನಾವಣಾ ಭಾಷಣ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತವೆಂಬಂತೆ ಮಾತನಾಡುತ್ತಿದ್ದಾರೆ.

    ಆದರೆ ಸದ್ಯದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ, ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ, ಮಹದೇವಪುರ ಶಾಸಕ ಅರವಿಂದ್‌ ಲಿಂಬಾವಳಿ ಮತ್ತಿತರರ ವಿರುದ್ಧ ಸಾಕ್ಷಿ ಸಹಿತ ಕಮಿಷನ್‌ ಆರೋಪ ಕೇಳಿಬಂದಿವೆ. ಹೀಗಿದ್ದರೂ ಈ ಬಗ್ಗೆ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಮಾತನಾಡಿಲ್ಲ ಯಾಕೇ? ಎಂದು ಅವರು ಪ್ರಶ್ನಿಸಿದರು.

    ಕೇಂದ್ರ ರಾಜ್ಯದಲ್ಲಿ ಬಿಜೆಪಿಯೇ ಆಡಳಿತದಲ್ಲಿದೆ. ಪಕ್ಷದ ಮತ್ತೊಬ್ಬ ಶಾಸಕ ಮಾಡಾಳ್‌ ವಿರೂಪಾ ಕ್ಷಪ್ಪರವರ ಮಗನು ಕಮಿಷನ್‌ ಪಡೆಯುತ್ತಿದ್ದಾಗ ಸಾಕ್ಷಿಸಮೇತ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಬರೋಬ್ಬರಿ ಎಂಟು ಕೋಟಿ ರೂಪಾಯಿ ದಾಖಲೆಯಿಲ್ಲದ ನಗದು ಪತ್ತೆಯಾಗಿದೆ. ನರೇಂದ್ರ ಮೋದಿ ಹಾಗೂ ಅಮಿತ್‌ ಶಾರವರಿಗೆ ತಾಕತ್ತಿದ್ದರೆ ಈ ಬಗ್ಗೆ ಪ್ರತಿಕ್ರಿಯಿಸಲಿ ಎಂದು ಅವರು ಸವಾಲು ಹಾಕಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap