ರಾಜ್ಯದಲ್ಲಿ ಖಾತೆ ತೆರೆಯಲು ಆಪ್‌ ಮಾಸ್ಟರ್‌ ಪ್ಲಾನ್‌..!

ಹುಬ್ಬಳ್ಳಿ

          ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚುಟುವಟಿಕೆಗಳು ಗರಿಗೆ ದರಿದ್ದು, ಬಿಜೆಪಿ, ಹೈಕಮಾಂಡ್‌ ನಾಯಕರು ಒಂದೇ ಸಮನೆ  ರಾಜ್ಯಕ್ಕೆ ಭೇಟಿ ನೀಡಿ ಮತಯಾಚನೆ ಶುರು ಮಾಡಿದ್ದಾರೆ. ಎಲ್ಲಾ ಪಕ್ಷಗಳು  ರಾಜ್ಯಾದ್ಯಂತ ಯಾತ್ರೆ ನಡೆಸುವ ಮೂಲಕ ಮತಯಾಚನೆ ಮಾಡುತ್ತಿದ್ದರೆ,ಈದೇ ಸಾಲಿಗೆ ಆಮ್‌ ಆದ್ಮಿ ಪಕ್ಷ ಕೂಡ  ಸೇರ್ಭಪಡೆಯಾಗಿದ್ದು ಭರ್ಜರಿ  ಪ್ರಚಾರ ಆರಂಭಿಸಿದೆ.

      ಕರ್ನಾಟಕದಲ್ಲಿಯೂ ಆಮ್‌ ಆದ್ಮಿ ಪಕ್ಷ ಖಾತೆ ತೆರೆಯಲು ಪ್ರಯತ್ನ ಮುಂದುವರೆಸಿದೆ. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷ ಸಂಘಟನೆಗೆ ಆಮ್‌ ಆದ್ಮಿ ಪಕ್ಷ ಭರ್ಜರಿ ಪ್ಲಾನ್‌ ರೂಪಿಸಿದೆ. ಹೀಗಾಗಿ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲು ಆಪ್‌ ಮುಖಂಡ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹಾಗೂ ಭಗವಂತ ಮಾನ್ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ.
     ದಾವಣಗೆರೆ ಕಾರ್ಯಕ್ರಮಕ್ಕೂ ಮುಂಚೆ ಹುಬ್ಬಳ್ಳಿಯಲ್ಲಿ ಸಭೆ ನಡೆಸಲಿರುವ ಅರವಿಂದ್ ಕೇಜ್ರಿವಾಲ್‌ ಪಕ್ಷದ ಮುಖಂಡರು ಮತ್ತು ಟಿಕೆಟ್ ಆಕಾಂಕ್ಷಿಗಳ ಜೊತೆಗೆ ಖಾಸಗಿ ಹೋಟೆಲ್‌ನಲ್ಲಿ ಚರ್ಚೆ ನಡೆಸ ಲಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಖಾತೆ ಓಪನ್ ಮಾಡಲು ಮಾಸ್ಟರ್ ಪ್ಲ್ಯಾನ್‌ ಮಾಡಿದ್ದು ಇಂದು ಅಭ್ಯರ್ಥಿಗಳ‌ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಮುಂಬರುವ ಚುನಾವಣೆಯಲ್ಲಿ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸಲು ಚಿಂತನೆ ನಡೆಸಿದ್ದಾರೆ.
 
     ಇದೇ ಮೊದಲ ಬಾರಿಗೆ ಆಗಮಿಸಿದ ಉಭಯ ನಾಯಕರಿಗೆ ವಾಣಿಜ್ಯ ನಗರಿಗೆ ಆಪ್ ನಾಯಕರು ಅದ್ಧೂರಿಯಾಗಿ ಸ್ವಾಗತ ನೀಡಿದರು. ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಹುಬ್ಬಳ್ಳಿಯಿಂದ ದಾವಣಗೆರೆಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap