ಅಂಚೆ ಕಚೇರಿಗಳಿಗೆ ಬೀಗ ಜಡಿದ BBMP: AAP ತೀವ್ರ ವಿರೋಧ

ಬೆಂಗಳೂರು:

    ನಗರದ ಸೇಂಟ್ ಜಾನ್ಸ್ ರಸ್ತೆ ಹಾಗೂ ವಸಂತನಗರದ ಅಂಚೆ ಕಚೇರಿಗಳಿಗೆ ಬಿಬಿಎಂಪಿ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದು, ಕೂಡಲೇ ಅದನ್ನು ತೆರವು ಮಾಡಿ ಅಂಚೆ ಕಚೇರಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಆಮ್ ಆದ್ಮಿ ಪಕ್ಷ ಬುಧವಾರ ಆಗ್ರಹಿಸಿದೆ.

    ಸುದ್ದಿಗಾರರೊಂದಿಗೆ ಮಾತನಾಡಿರುವ ಎಎಪಿ ನಗರಾಧ್ಯಕ್ಷ ಡಾ. ಸತೀಶ್ ಕುಮಾರ್, ಬಿಬಿಎಂಪಿ ಕಟ್ಟಡದಲ್ಲಿರುವ ಅಂಚೆ ಕಚೇರಿಗಳು ಬಾಡಿಗೆ ಕಟ್ಟುತ್ತಿಲ್ಲ ಎನ್ನುವ ಕಾರಣ ನೀಡಿ ಅಧಿಕಾರಿಗಳು ಬಾಗಿಲು ಹಾಕಿಸುತ್ತಿರುವ ಕ್ರಮ ಖಂಡನೀಯ ಎಂದು ಕಿಡಿಕಾರಿದರು. ಭಾರತೀಯ ಅಂಚೆ ಇಲಾಖೆ ಪ್ರಪಂಚದಲ್ಲೇ ಅತಿ ದೊಡ್ಡ ಸರ್ಕಾರಿ ಅಂಚೆ ಇಲಾಖೆ ಎನ್ನುವ ಹೆಗ್ಗಳಿಕೆ ಪಡೆದಿದೆ. ಇದು ಭಾರತದ ಪರಂಪರೆ ಹಾಗೂ ಇತಿಹಾಸದ ಭಾಗವಾಗಿದೆ. ಕಡಿಮೆ ವೆಚ್ಚದಲ್ಲಿ ಸಾರ್ವಜನಿಕರಿಗೆ ಅಂಚೆ ಸೇವೆ ಒದಗಿಸುತ್ತಿದೆ. ಇಂತಹ ಸೇವಾ ವಲಯದ ಕಚೇರಿಯನ್ನು ಬಾಡಿಗೆ ಕಟ್ಟಿಲ್ಲ ಎಂಬ ಕಾರಣಕ್ಕೆ ಬಿಬಿಎಂಪಿ ಅಧಿಕಾರಿಗಳು ಮುಚ್ಚಿಸಿರುವುದು ವಿಷಾದನೀಯ ಎಂದು ಹೇಳಿದರು.

    ಅಂಚೆ ಕಚೇರಿಗಳ ಕಟ್ಟಡಗಳ ಮೇಲೆ ತೆರಿಗೆ ಹಾಕದೆ, ಶುಲ್ಕ ವಸೂಲಿ ಮಾಡದೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡಬೇಕು. ಯಾರೋ ಉದ್ಯಮಿಗಳಿಗೆ, ಪ್ರಭಾವಿಗಳಿಗೆ, ರಾಜಕಾರಣಿಗಳಿಗೆ ಬೇಕಾದಷ್ಟು ಭೂಮಿ, ಕಟ್ಟಡಗಳನ್ನು ಧಾರೆಯೆರೆದು ಕೊಡುತ್ತಿರುವಾಗ ಜನಸಮಾನ್ಯರಿಗೆ ನೆರವಾಗುವ ಅಂಚೆ ಕಚೇರಿಗಳಿಂದ ಬಾಡಿಗೆ ತೆಗೆದುಕೊಳ್ಳದಿದ್ದರೆ ಸರ್ಕಾರಕ್ಕೆ ಅಂತಹ ದೊಡ್ಡ ನಷ್ಟವೇನೂ ಸಂಭವಿಸುವುದಿಲ್ಲ ಎಂದು ತಿಳಿಸಿದರು

Recent Articles

spot_img

Related Stories

Share via
Copy link
Powered by Social Snap