ನವದೆಹಲಿ:
ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ ಮದ್ಯ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ನಂತರ ಜೈಲಿನಿಂದ ಹೊರಬಂದ ಮೂರನೇ ಉನ್ನತ ಎಎಪಿ ನಾಯಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಗಿದ್ದಾರೆ.
ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತನ್ನ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಣಾಯಕ ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ನ್ಯಾಯಪೀಠವು ಕೇಜ್ರಿವಾಲ್ ಅವರಿಗೆ 10 ಲಕ್ಷ ರೂ.ಗಳ ಜಾಮೀನು ಬಾಂಡ್ ಮೂಲಕ ಷರತ್ತುಬದ್ದ ಜಾಮೀನು ನೀಡಿದೆ.
ಪ್ರಕರಣದ ಅರ್ಹತೆಯ ಬಗ್ಗೆ ಯಾವುದೇ ಸಾರ್ವಜನಿಕ ಪ್ರತಿಕ್ರಿಯೆ ನೀಡದಂತೆ ಉನ್ನತ ನ್ಯಾಯಾಲಯವು ಕೇಜ್ರಿವಾಲ್ ಅವರಿಗೆ ನಿರ್ದೇಶನ ನೀಡಿತು.
ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ತೀರ್ಪು ನೀಡಿದೆ. ನ್ಯಾಯಪೀಠವು ಸೆಪ್ಟೆಂಬರ್ ೫ ರಂದು ಅರ್ಜಿಗಳ ಮೇಲಿನ ತೀರ್ಪನ್ನು ಕಾಯ್ದಿರಿಸಿತ್ತು. ಮದ್ಯ ನೀತಿ ಹಗರಣದಿಂದ ಉದ್ಭವಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ಮುಖ್ಯಸ್ಥರನ್ನು ಜೂನ್ 26 ರಂದು ಸಿಬಿಐ ಬಂಧಿಸಿತ್ತು.ಜುಲೈ 12 ರಂದು, ಸುಪ್ರೀಂ ಕೋರ್ಟ್ ಇಡಿ ಪ್ರಕರಣದಲ್ಲಿ ಮುಖ್ಯಮಂತ್ರಿಗೆ ಮಧ್ಯಂತರ ಜಾಮೀನು ನೀಡಿತು. ಇಡಿ ಬಂಧನವನ್ನು ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಯಿತು. ಆದಾಗ್ಯೂ, ಸಿಬಿಐ ಬಂಧನದಿಂದಾಗಿ ಅವರು ತಿಹಾರ್ ಜೈಲಿನಲ್ಲಿದ್ದರು.