ಅಧಿಕಾರಿಗಳ ಕಾರ್ಯ ವೇಗಕ್ಕೆ ಶಾಸಕ ಅಬ್ಬಯ್ಯಾ ಪ್ರಸಾದ್ ಸೂಚನೆ

ಹುಬ್ಬಳ್ಳಿ:

    ಅಧಿಕಾರಿಗಳ ನಿರ್ಲಕ್ಷ್ಯಂದ ಮಾರುಕಟ್ಟೆ ಪ್ರದೇಶಗಳು ಹದಗೆಟ್ಟಿವೆ. ಅಸರ್ಮಪಕ ರ್ಪಾಂಗ್ ವ್ಯವಸ್ಥೆ, ರಸ್ತೆ, ಫುಟ್​ಪಾತ್ ಒತ್ತುವರಿಯಾದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಂತಿದೆ. 15ದಿನಗಳಲ್ಲಿ ಮಾರುಕಟ್ಟೆ ಸುಧಾರಣೆಗೆ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಶಾಸಕ ಪ್ರಸಾದ ಅಬ್ಬಯ್ಯ ಎಚ್ಚರಿಕೆ ನೀಡಿದರು

    ಇಲ್ಲಿಯ ಮಹಾನಗರ ಪಾಲಿಕೆ ಆಯುಕ್ತರ ಕಚೇರಿ ಮೇಲಿನ ಸಭಾಭವನದಲ್ಲಿ ಕರೆದ ಹು-ಧಾ ಪೂರ್ವ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸೂಕ್ತ ರ್ಪಾಂಗ್ ವ್ಯವಸ್ಥೆ ಇಲ್ಲದ ಕಟ್ಟಡಗಳ ಮಾಲೀಕರಿಗೆ ಕೂಡಲೇ ನೋಟಿಸ್ ಜಾರಿ ಮಾಡಿ. ಶಿಥಿಲಾವಸ್ಥೆಯಲ್ಲಿರುವ ಜಿಗಳೂರು ಕಟ್ಟಡದ ಸ್ಥಿರತೆ ಪರಿಶೀಲಿಸಬೇಕು. ಗಣೇಶಪೇಟ ತರಕಾರಿ ಮಾರುಕಟ್ಟೆ ಬಳಿ ಇರುವ ಕಟ್ಟಡವನ್ನು ತೆರವುಗೊಳಿಸಲು ಶೀಘ್ರ ಕ್ರಮ ವಹಿಸಬೇಕು ಎಂದರು.

5ಕೋಟಿ ರೂ.ವೆಚ್ಚದಲ್ಲಿ ಕಮಾಂಡ್ ಸೆಂಟರ್

    ಮಾರುಕಟ್ಟೆ ಸೇರಿದಂತೆ ಕ್ಷೇತ್ರದ ಸಮಗ್ರ ನಿರ್ವಹಣೆಗೆ ಬಿಆರ್​ಟಿಎಸ್ ಮಾದರಿಯಲ್ಲಿ ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್ ನಿರ್ಮಾಣ ಮಾಡಬೇಕು. ನಗರದ ವಿವಿಧ ಬಡಾವಣೆ, ಮಾರುಕಟ್ಟೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಎಲ್ಲಿ ಏನು ನಡೆಯುತ್ತಿದೆ ಎಂಬುದರ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಲು ಇದು ಸಹಕಾರಿಯಾಗಲಿದೆ. ಇದರಿಂದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆಯಾಗಲಿದೆ. ಇದಕ್ಕೆ 5 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಹೇಳಿದರು.

    ಮಂಟೂರು ರಸ್ತೆಯಲ್ಲಿ ನಿರ್ವಿುಸುತ್ತಿರುವ 2600 ಆಶ್ರಯ ಮನೆಗಳಲ್ಲಿ ಮೊದಲ ಹಂತದಲ್ಲಿ ನಿರ್ಮಾಣ ಮಾಡಲಾದ 1300 ಮನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರುವರಿ ಮೊದಲ ವಾರದಲ್ಲಿ ಫಲಾನುಭವಿಗಳಿಗೆ ಹಸ್ತಾಂತರ ಮಾಡಲಿದ್ದಾರೆ. ಹೀಗಾಗಿ ಮಂಟೂರು ರಸ್ತೆಯಲ್ಲಿರುವ ಮೀನು ಸಗಟು ಮಾರುಕಟ್ಟೆ ಸ್ಥಳಾಂತರಕ್ಕೆ ಶೀಘ್ರ ಕ್ರಮಕೈಗೊಳ್ಳಬೇಕು. ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಹುಡಾ ಆಯುಕ್ತ ಸಂತೋಷ ಬಿರಾದಾರ, ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ರುದ್ರೇಶ ಘಾಳಿ, ಜೆಎಂಡಿ ಅಜೀಜ್ ದೇಸಾಯಿ, ಇತರರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap