ಬೆಂಗಳೂರು:
ಕೈಗಾರಿಕಾ ಇಲಾಖೆ ಅಧಿಕಾರಿ ಹಾಗೂ ಬಿಡಿಎ ಎಂಜಿನಿಯರ್ ಮನೆ ಮೇಲೆ ಶುಕ್ರವಾರ ಬೆಳಗ್ಗೆ ಎಸಿಬಿ ದಾಳಿ ನಡೆಸಿದೆ. ಕೈಗಾರಿಕಾ ಇಲಾಖೆ ಅಧಿಕಾರಿ ಟಿ.ಆರ್. ಸ್ವಾಮಿ ಅವರ ಮನೆಯಲ್ಲಿ 5 ಕೋಟಿ ರೂ ಹಣವನ್ನು ವಶಪಡಿಸಿಕೊಂಡಿದೆ.
ಕೈಗಾರಿಕಾ ಇಲಾಖೆ ಅಧಿಕಾರಿ ಟಿ.ಆರ್. ಸ್ವಾಮಿ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ, ಬಲವಾದ ಮಾಹಿತಿ ಮೇರೆಗೆ ಏಸಿಬಿ ಅಧಿಕಾರಿಗಳು ದಾಳಿ ನಡೆಸಲು ಮುಂದಾಗಿದ್ದರು ಆ ಸಮಯದಲ್ಲಿ ಸ್ವಾಮಿ ಬಾಗಿಲು ತೆರೆಯದೆ ಅಸಹಕಾರ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಲಾಕ್ ಒಡೆದು ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸ್ವಾಮಿ ಕೆಐಎಡಿಬಿಯಲ್ಲಿ ಮುಖ್ಯ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ, ಮಲ್ಲೇಶ್ವರದಲ್ಲಿರುವ ಮಂತ್ರಿ ಗ್ರೀನ್ಸ್ ಅಪಾರ್ಟ್ ಮೆಂಟ್ ನ 15 ನೇ ಮಹಡಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದು 5 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.ಇನ್ನೂ ತನಿಖೆ ಮುಂದುವರೆದಿದೆ.
ಬಿಡಿಎ ಅಧಿಕಾರಿಯ ಮೇಲೂ ದಾಳಿ :
ಬೆಂಗಳೂರು ಬಿಡಿಎ ವಸತಿ ಸಮುಚ್ಛಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಇಂಜಿನಿಯರ್ ಗೌಡಯ್ಯ ಅವರ ಮನೆ ಮೇಲೆ ಎಸಿಬಿ ದಾಳಿ ಮಾಡಿದೆ.
ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಅವರ ನಿವಾಸಕ್ಕೆ ಆಗಮಿಸುತ್ತಿದ್ದ ಎಸಿಬಿ ಅಧಿಕಾರಿಗಳನ್ನು ಕಂಡ ಗೌಡಯ್ಯ ಅವರು ಮನೆಯಲ್ಲಿದ್ದ 2 ಕೋಟಿ ಹಣವನ್ನು ಬಿಸಾಡಿದ್ದಾರೆ. ಕಳೆದ 7 ವರ್ಷಗಳಿಂದ ಬಿಡಿಎಯಲ್ಲಿಯೇ ಇರುವ ಗೌಡಯ್ಯ ಅವರ ಮನೆಯನ್ನು ಎಸಿಬಿ ಅಧಿಕಾರಿಗಳು ಶೋಧಿಸಿ ಹಲವು ಮಹತ್ವದ ದಾಖಲೆಗಳನ್ನು ಸಂಗ್ರಹಿಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








