ಬೆಂಗಳೂರು:
ಭಾರತೀಯ ಪೊಲೀಸ್ ಸೇವೆಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆಯನ್ನು ಕೇಂದ್ರ ಸರ್ಕಾರ ಇಂದು ಅಂಗೀಕರಿಸಿದೆ.
2011ರ ಕರ್ನಾಟಕ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸ್ ಎಸ್‌ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೇ. 28 ರಂದು ಕರ್ತವ್ಯಕ್ಕೆ ರಾಜೀನಾಮೆ ನೀಡಿದ್ದರು. ಆ ರಾಜೀನಾಮೆಯನ್ನು ಕೇಂದ್ರ ಗೃಹ ಇಲಾಖೆ ಇಂದು ಅಂಗೀಕಾರ ಮಾಡಿದೆ. ಅಣ್ಣಾಮಲೈ ಅವರ ರಾಜೀನಾಮೆಯನ್ನು ಸೆ.15ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರ ಅಂಗೀಕರಿಸಿ, ಆದೇಶ ಹೊರಡಿಸಿದೆ.
ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಹೇಳಿದ್ದ ಅಣ್ಣಾಮಲೈ, ಕರ್ತವ್ಯದಿಂದಾಗಿ ವೈಯಕ್ತಿಕ ಬದುಕು ಕಳೆದುಕೊಳ್ಳುತ್ತಿರುವ ಭಾವ ಆವರಿಸಿದ್ದು, ವೈಯಕ್ತಿಕ ಬದುಕಿಗೆ ಹೆಚ್ಚಿನ ಆದ್ಯತೆ ನೀಡುವ ಕಾರಣ ನೀಡುವ ಕಾರಣ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಾವು ಬರೆದಿದ್ದ ಸುದೀರ್ಘ ಪತ್ರದಲ್ಲಿ ಹೇಳಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ