ಮಡಿಕೇರಿ:
ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ವರು ಮೃತಪಟ್ಟಿರುವುದು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಎಂಬಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಮಾರುಕಟ್ಟೆ ರಸ್ತೆಯ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಶಿಬ್ ಮತ್ತು ರಿಶು ಮೃತರು ಎಂದು ತಿಳಿದುಬಂದಿದೆ.
ಕಾರಿನಲ್ಲಿ ಉಳ್ಳಾಲದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಕಾರು ಡಿಕ್ಕಿಯಾಗಿದ್ದರಂದ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸುಳ್ಯದ ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
