ತುಮಕೂರು :
ನಗರದ ಹೊರಪೇಟೆಯ ಕಾಶಿವಿಶ್ವನಾಥ ದೇವಸ್ಥಾನದ ಅರ್ಚಕರಾದ ಕುಮಾರ ಆರಾಧ್ಯ ಅವರು ಸೋಮವಾರ ರಾತ್ರಿ ನಗರದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟರು. ಇವರಿಗೆ 57 ವರ್ಷ ವಯಸ್ಸಾಗಿತ್ತು.
ಸೋಮವಾರ ರಾತ್ರಿ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಲಿಂಗಾಪುರದ ತಮ್ಮ ಮನೆಗೆ ತೆರಳುತ್ತಿರುವಾಗ ರಾತ್ರಿ 10 ಗಂಟೆ ಸುಮಾರಿನಲ್ಲಿ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜು ಎದುರು ಹಿಂದಿನಿಂದ ಬಂದ ಮಿನಿ ಲಾರಿ ಡಿಕ್ಕಿ ಹೊಡೆಯಿತು.
ಅಪಘಾತದಲ್ಲಿ ತೀವ್ರ ಗಾಯಗೊಂಡ ಕುಮಾರ್ ಆರಾಧ್ಯ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಉಸಿರೆಳೆದರು.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
