ಚಾಮರಾಜನಗರ:  ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ : ಮೂವರ ಸಾವು!!

ಚಾಮರಾಜನಗರ: 

      ಗೂಡ್ಸ್ ವಾಹನ, ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ
ಕೊಳ್ಳೆಗಾಲ ತಾಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಸಂಭವಿಸಿದೆ.

     ಮೃತರನ್ನು ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ ಪಳನಿಮೇಡು ಗ್ರಾಮದ ಡೇವಿಡ್, ಸೇತು, ಶೇಷುರಾಜ್ ಎಂದು ಗುರುತಿಸಲಾಗಿದೆ.

     ಮೃತರು ಕೊಳ್ಳೇಗಾಲದಿಂದ ಮಳವಳ್ಳಿ ಕಡೆಗೆ ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಮಳವಳ್ಳಿಯಿಂದ ಕೊಳ್ಳೇಗಾಲ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

      ಸದ್ಯ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಕೊಳ್ಳೆಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap