ಕುಂಭಮೇಳಕ್ಕೆ ತೆರಳುತ್ತಿದ್ದ ವಿಜಯಪುರ ಜಿಲ್ಲೆಯ ಇಬ್ಬರ ಸಾವು

ವಿಜಯಪುರ:

    ಉತ್ತರ ಪ್ರದೇಶದ ಪ್ರಯಾಗ್‌ರಾಜ್​ನ ಕುಂಭಮೇಳಕ್ಕೆ ತೆರಳುತ್ತಿದ್ದಾಗ ನಡೆದ ಅಪಘಾತದಲ್ಲಿ ಜಿಲ್ಲೆಯ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.ಚಡಚಣದಿಂದ ತೆರಳಿದ್ದ ಯಾತ್ರಾರ್ಥಿಗಳ ವಾಹನವು ಗುಜರಾತ್‌ನ ಪೋರ್ ಬಂದರ್‌ನಲ್ಲಿ ಸೋಮವಾರ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ರಾಜ್ಯದ ವಿಜಯಪುರ ಜಿಲ್ಲೆಯ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ.

   ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗೆ (40) ಮೃತಪಟ್ಟವರು ಎನ್ನಲಾಗಿದೆ. ಮೃತಪಟ್ಟವರು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನವರಾಗಿದ್ದು ನಿಂತಿದ್ದ ಟಿಪ್ಪರ್ ಗೆ ವಾಹನವೊಂದು ವೇಗವಾಗಿ ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ವಾಹನದಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

Recent Articles

spot_img

Related Stories

Share via
Copy link