ಶಿರಸಿ :
ಇಲ್ಲಿನ ಎಸ್‌ಬಿಐ ಸರ್ಕಲ್ ಬಳಿ ಸೋಮವಾರ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಗಣೇಶ ನಗರದ ರವಿಚಂದ್ರ ವಡ್ಡರ್ (34), ಸುನೀಲ ಇಂದೂರ (26) ಮೃತರು.
ರವಿಚಂದ್ರ ತಂದೆ ಹನುಮಂತಪ್ಪ ಸೋಮವಾರ ನಸುಕಿನ ಜಾವ ಮೃತಪಟ್ಟಿದ್ದಾರೆ. ಅವರ ಶವಸಂಸ್ಕಾರಕ್ಕೆ ಹೂ ತರಲು ಇಬ್ಬರು ಮಾರುಕಟ್ಟೆಗೆ ತೆರಳುತ್ತಿದ್ದರು. ಈ ವೇಳೆ ಇನ್ನೊಂದು ರಸ್ತೆಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಬಸ್ ಅಡಿಗೆ ಸಿಲುಕಿದ ಬೈಕ್ ನುಜ್ಜುಗುಜ್ಜಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ರವಿ ನಾಯ್ಕ ಭೇಟಿ ನೀಡಿದ್ದು, ಪರಿಶೀಲಿಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
