ಟ್ರಕ್ ಗಳ ನಡುವೆ ಭೀಕರ ಅಪಘಾತ : 11 ಮಂದಿ ದಾರುಣ ಸಾವು!!

ಗುಜರಾತ್ :

     ಎರಡು ಟ್ರಕ್’ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ರಾಜ್ಯದ ವಡೋದರಾದಲ್ಲಿ ನಡೆದಿದೆ.

     ವಡೋದರಾದ ವಾಘೋಡಿಯಾ ಕ್ರಾಸ್ ರಸ್ತೆ ಬಳಿಯ ಇರುವ ಸೇತುವೆ ಬಳಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ಟ್ರಕ್ ನಲ್ಲಿದ್ದ ಪ್ರಯಣಿಕರೆಲ್ಲಾ ಸೂರತ್ ನಿಂದ ಪಾವಗಢದ ಕಡೆಗೆ ಪ್ರಯಾಣಿಸುತ್ತಿದ್ದರು.  

     ಅಪಘಾತದಲ್ಲಿ 9 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೆ 17 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗೆಂದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

     ಅಪಘಾತ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಮೃತಪಟ್ಟರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ