ವಿಜಯಪುರ :
ಸರ್ಕಾರಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ದುರ್ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ ಬಳಿ ನಡೆದಿದೆ.
ಖೇಡಗಿ ಗ್ರಾಮದ ಕೆವಿಜಿ ಬ್ಯಾಂಕ್ ಮ್ಯಾನೇಜರ್ ಡಿ.ಎಸ್.ಬಿರಾದಾರ, ಕ್ಯಾಷಿಯರ್ ಚೈತನ್ಯ ಕುಮಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿಗಳು.
ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕನನ್ನು ಬಂಧಿಸಿದ್ದಾರೆ. ಇಂಡಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ