ಬೆಳಗಾವಿ :
ಕಂಟೇನರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರೂ ಚಾಲಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ತಾಲ್ಲೂಕಿನ ಪುಣೆ-ಬೆಂಗಳೂರು ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಉತ್ತರಪ್ರದೇಶದ ನೀರಜ ಬಲ್ಲೂರ ಹಾಗೂ ಟ್ರಕ್ ಚಾಲಕ ಮಹಾರಾಷ್ಟ್ರದ ರಾಜೇಂದ್ರ ದೋಯಿಪಡೆ ಎಂದು ಗುರುತಿಸಲಾಗಿದೆ.
ಹಾವೇರಿ ಜಿಲ್ಲೆಯ ಶಿಗ್ಗಾವಿ ಕಡೆಯಿಂದ ಮೆಕ್ಕೆಜೋಳ ಹಿಟ್ಟಿನ ಚೀಲ ತುಂಬಿಕೊಂಡು ಕಂಟೈನರ್ ಮಹಾರಾಷ್ಟ್ರದ ಕಡೆಗೆ ಹೊರಟಿತ್ತು. ಸುತಗಟ್ಟಿಯ ಘಾಟ್‌ನ ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಬದಿಯ ರಸ್ತೆಗೆ ಬಂದಿದೆ. ಇತ್ತ ಮಹಾರಾಷ್ಟ್ರದಿಂದ ಬೆಳಗಾವಿಗೆ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಅಡ್ಡಲಾಗಿ ಕಂಟೈನರ್ ಢಿಕ್ಕಿ ಹೊಡೆದಿದೆ. ಪರಸ್ಪರ ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಇಲ್ಲಿಯೇ ಸಮೀಪದಲ್ಲಿ ನಿಲ್ಲಿಸಿದ್ದ ಔಷಧಿ ತುಂಬಿಕೊಂಡಿದ್ದ ಕ್ಯಾಂಟರ್ ಗೆ ಢಿಕ್ಕಿ ಹೊಡೆದು ಭೀಕರ ಅಪಘಾತವಾಗಿದೆ.
ಸ್ಥಳಕ್ಕೆ ಎಸಿಪಿ ಗುಡಾಜಿ, ಕಾಕತಿ ಇನ್ಸಪೆಕ್ಟರ್ ರಾಘವೇಂದ್ರ ಹಳ್ಳೂರ, ಪಿಎಸ್‌ಐ ಅವಿನಾಶ ಯರಗೊಪ್ಪ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ