ಕೊರಟಗೆರೆ : ಆಟೋ-ಲಾರಿ ಡಿಕ್ಕಿ : ಆಟೋ ಚಾಲಕನ ಸಾವು!!

 ತುಮಕೂರು : 

      ಲಾರಿ ಹಾಗೂ ಆಟೋರಿಕ್ಷಾಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಆಟೋ ಚಾಲಕ ಸ್ಥಳದಲ್ಲೇ ಅಸು ನೀಗಿರುವ ಘಟನೆ ಕೊರಟಗೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿಯ ನವಿಲುಕುರಿಕೆ ಕ್ರಾಸ್ ಬಳಿ ಸಂಭವಿಸಿದೆ.

      ಮೃತ ವ್ಯಕ್ತಿಯನ್ನು ಕೋಳಾಲ ಹೋಬಳಿಗೆ ಸೇರಿದ ಪುಟ್ಟನರಸಯ್ಯನಪಾಳ್ಯದ ಮುತ್ತುರಾಜ್ (44) ಎಂದು ಗುರುತಿಸಲಾಗಿದೆ.
ಬೆಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ನವಿಲುಕರಿಕೆ ಕ್ರಾಸ್‍ನಲ್ಲಿ ವಾಹನವೊಂದನ್ನು ಹಿಂದಕ್ಕೆ ಹಾಕುವ ರಭಸದಲ್ಲಿ ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದೆ. ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

      ಲಾರಿ ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯೆ ಘಟನೆಗೆ ಕಾರಣ ಎಂದು ತಿಳಿದು ಬಂದಿದ್ದು, ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕೊರಟಗೆರೆ ಸಿಪಿಐ ನದಾಫ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap