ತುಮಕೂರು
ನಿಂತಿದ್ದ ಬಸ್ಗೆ ವೇಗವಾಗಿ ಬಂದ ಟೆಪೋ ಟ್ರಾವಲ್ಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಕುಣಿಗಲ್ ತಾಲೂಕಿನ ರಾಜ್ಯ ಹೆದ್ದಾರಿ 33 ಹುಲಿಯೂರುದುರ್ಗ ಹೋಬಳಿ ಡಿ.ಹೊಸಹಳ್ಳಿ ಗ್ರಾಮದ ಬಳಿ ನಡೆದಿದೆ. ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿಗಳಾದ ಟಿಟಿ ಚಾಲಕ ವೀರೇಶ್ (30) ಹಾಗೂ ಶಶಿಕಲಾ( 69) ಮೃತ ದುರದೈವಿಗಳು ಎಂದು ಗುರುತಿಸಲಾಗಿದೆ.
ಇನ್ನು ಘಟನೆಯಲ್ಲಿ ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ ಹಾಗೂ ಪ್ರತೀಕ್ಷಾ ಗಂಭೀರ ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸ್ಥಳಕ್ಕೆ ಹುಲಿಯೂರು ದುರ್ಗ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಘಟನೆಯ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/05/kunigal.jpg)