ಜಾಲಾವೃತವಾದ ಬೆ-ಮೈ ಎಕ್ಸ್‌ ಪ್ರೇಸ್‌ ವೇ : ಕಾರಿಗೆ ಲಾರಿ ಡಿಕ್ಕಿ

ರಾಮನಗರ 

    ಕೆಲ ತಿಂಗಳುಗಳ ಹಿಂದೆ ಇನ್ನೂ ಉದ್ಗಾಟನೆಯಾಗದೆ ಇದ್ದಾಗಲೆ  ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಹಲವು ಅವಾತರಗಳಿಗೆ ಕಾರಣವಾಗಿತ್ತು ಈ ಉದ್ಗಾಟನೆಯಾದರೂ ಈ ಅವಾಂತರಗಳು ಕಡಿಮೆಯಾಗಿಲ್ಲ ಇನ್ನು ರಾಮನಗರ ಬಳಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವಾರಾಂತ್ಯದ ಹಿನ್ನೆಲೆಯಲ್ಲಿ ಸಾಕಷ್ಟು ವಾಹನಗಳು ಈ ಮಾರ್ಗವಾಗಿ ಚಲಿಸುತ್ತಿದ್ದು, ಜಲಾವೃತಗೊಂಡ ರಸ್ತೆಯಿಂದ ಸವಾರರು ಹೈರಾಣಾಗಿದ್ದಾರೆ.

 

   ಹೆದ್ದಾರಿಯ ಕೆಳಸೇತುವೆ ಬಳಿ ನೀರು ನಿಂತಿದ್ದು, ವಾಹನಗಳು ಮುಂದಕ್ಕೆ ಚಲಿಸಲಾಗಿದೇ ವಾಹನ ದಟ್ಟಣೆ ಉಂಟಾಗಿದೆ. ಅಲ್ಲದೇ ಸರಣಿ ಅಪಘಾತಗಳು ಕೂಡ ನಡೆದಿದೆ. ದಶಪಥ ಹೆದ್ದಾರಿಯಲ್ಲಿ ಮಳೆ ಅವಾತರ ಹಿನ್ನೆಲೆಯಲ್ಲಿ ಮಳೆಯ ನೀರಿನಿಂದ ಕಾರು ಕೆಟ್ಟುನಿಂತಿದ್ದು, ಈ ವೇಳೆ ಹಿಂದೆ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ.
   ಘಟನೆಯಲ್ಲಿ ಕಾರಿನ ಹಿಂಭಾಗ ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್‌ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆದ್ದಾರಿ ಪ್ರಾಧಿಕಾರ ಹಾಗೂ ಸರ್ಕಾರದ ವಿರುದ್ಧ ಕಾರಿನ ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ.

    ದುಬಾರಿ ಟೋಲ್ ಕಟ್ಟಿದ್ರೂ ಸರಿಯಾದ ವ್ಯವಸ್ಥೆ ಇಲ್ಲ. ಇಷ್ಟು ಸಣ್ಣ ಮಳೆಗೆ ಹೆದ್ದಾರಿಯ ಸ್ಥಿತಿ ಹೀಗಾದರೆ ಮಳೆಗಾಲದಲ್ಲಿ ಇನ್ನೇನು ಗತಿ, ಅಧಿಕಾರಿಗಳು ಮಳೆ ನೀರು ಹರಿದು ಹೋಗುವಂತೆ ಕ್ರಮಕೈಗೊಳ್ಳಬೇಕು ಎಂದು ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.

 
    270 ರೂಪಾಯಿ ಟೋಲ್‌ ಕಟ್ಟಿದ್ದೇನೆ. ಮಳೆ ನೀರಿನಿಂದ ಕಾರು ಎಂಜಿನ್ ಸೀಜ್‌ ಆಗಿದೆ. ಬೆಳಗ್ಗಿನ ಜಾವ ಸಮಯದಲ್ಲಿ ಈ ಮಾರ್ಗವಾಗಿ ಬಂದು ರಸ್ತೆ ನೀರಿನಲ್ಲಿ ಕಾರು ಸಿಲುಕಿಕೊಂಡಿದೆ. ಟೋಯಿಂಗ್ ಮಾಡೋದಕ್ಕೆ ದುಡ್ಡು, ಗ್ಯಾರೇಜ್ ಸಿಬ್ಬಂದಿ ಕರೆತರೋದಕ್ಕೆ ದುಡ್ಡು, ಇತ್ತ ಇಂಜಿನ್ ಸೀಜ್. ಟೋಲ್ ಕಟ್ಟಿದ್ದಲ್ಲದೆ ಇಷ್ಟು ನಷ್ಟ ಮಾಡಿಕೊಂಡಿದ್ದೇನೆ. ನನಗೆ ಪರಿಹಾರ ಕೊಡಿ ಎಂದು ಮಡಿಕೇರಿ ಕಡೆ ಪ್ರಯಾಣ ಮಾಡುತ್ತಿದ್ದ ಕಾರು ಚಾಲಕ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap